Tuesday, June 9, 2026
HomeUncategorizedಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂಗೆ  ಕೊಂಡೊಯ್ಯುತ್ತಿದ್ದ ಹೊಸ ಫಾರ್ಚೂನರ್ ಕಾರು ಬಸ್ ಗೆ ಡಿಕ್ಕಿ

ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂಗೆ  ಕೊಂಡೊಯ್ಯುತ್ತಿದ್ದ ಹೊಸ ಫಾರ್ಚೂನರ್ ಕಾರು ಬಸ್ ಗೆ ಡಿಕ್ಕಿ

- Advertisement -
- Advertisement -

ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂಗೆ  ಕೊಂಡೊಯ್ಯುತ್ತಿದ್ದ ಹೊಸ ಫಾರ್ಚೂನರ್ ಕಾರು ನಿಂತಿದ್ದ ಬಸ್ ಗೆ  ಡಿಕ್ಕಿಯಾದ ಘಟನೆ  ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.ಢಿಕ್ಕಿ ಹೊಡೆದ ರಭಸಕ್ಕೆ ಹೊಚ್ಚ ಹೊಸ ಫಾರ್ಚೂನ‌ರ್ ಕಾರು ನಜ್ಜುಗುಜ್ಜಾಗಿದೆ.

ಕಾರನ್ನು ಕುಂದಾಪುರ ಶೋರೂಂ ನಿಂದ ಮಂಗಳೂರು ಶೋರೂಂ ಗೆ ಹೊಸ ಫಾರ್ಚೂನರ್ ಕಾರನ್ನು ಚಾಲಕ ಕೊಂಡೊಯ್ಯುತ್ತಿದ್ದ. ಈ ವೇಳೆ ಉಡುಪಿ ಸಮೀಪದ ನಿಟ್ಟೂರು ಬಳಿ ಹೋಗುತ್ತಿದ್ದಂತೆ ಕಾರು ಚಾಲಕನ ನಿರ್ಲಕ್ಷ್ಯದಿಂದ ರಸ್ತೆ ಬದಿ ಪ್ರಯಾಣಿಕರನ್ನು ಹತ್ತಿಸಲು ನಿಲ್ಲಿಸಿದ್ದ ಬಸ್ ಗೆ ಢಿಕ್ಕಿ ಹೊಡೆದಿದೆ.ಘಟನೆ ಬಳಿಕ ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ವಿಷಯ ತಿಳಿದು ಕಾರು ಶೋರೂಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು.ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ.

- Advertisement -

Latest News

error: Content is protected !!