- Advertisement -
- Advertisement -
ಬೆಂಗಳೂರು: ಕರ್ನಾಟಕದ ಮುಂದಿನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.
ಶುಕ್ರವಾರ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಿಗದಿಯಾಗಿದ್ದು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಪ್ರಮಾಣ ವಚನ ಬೋಧಿಸಲಿದ್ದಾರೆ.
ಈ ಮಧ್ಯೆ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ಗಮಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಲೋಕಭವನದಲ್ಲಿ ಭೇಟಿ ಮಾಡಿ ಸೌಹಾರ್ದಯುತ ಮಾತುಕತೆ ನಡೆಸಿದರು.
2021 ರಿಂದ ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದು, ಜುಲೈ 11ಕ್ಕೆ ಅವರ ಐದು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡಿತ್ತು.
ಡಾ. ಸುಧಾ ಯಾದವ್ ವಿ.ಎಸ್. ರಮಾದೇವಿ ಅವರ ಬಳಿಕ ರಾಜ್ಯದ ಎರಡನೇ ಮಹಿಳಾ ರಾಜ್ಯಪಾಲೆಯಾಗಲಿದ್ದಾರೆ.
- Advertisement -


