Tuesday, July 14, 2026
Homeಕರಾವಳಿಧರ್ಮಸ್ಥಳ; ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುವ ಭಕ್ತಾದಿಗಳಿಗೆ ಹೊಸ ರೂಲ್ಸ್; ಇನ್ಮೇಲೆ ನದಿಯಲ್ಲಿ ಸ್ನಾನ ಮಾಡುವಾಗ...

ಧರ್ಮಸ್ಥಳ; ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುವ ಭಕ್ತಾದಿಗಳಿಗೆ ಹೊಸ ರೂಲ್ಸ್; ಇನ್ಮೇಲೆ ನದಿಯಲ್ಲಿ ಸ್ನಾನ ಮಾಡುವಾಗ ಸೋಪು, ಶಾಂಪೂ ಬಳಸುವಂತಿಲ್ಲ

- Advertisement -
- Advertisement -

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ವಿಶೇಷ ಸೂಚನೆಯೊಂದನ್ನು ನೀಡಲಾಗಿದೆ.

ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಇಳಿಕೆಯಾಗುತ್ತಿದೆ. ಹೀಗಾಗಿ ಭಕ್ತಾದಿಗಳು ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುವಾಗ ಶ್ಯಾಂಪೂ ಅಥವಾ ಸೋಪು ಇನ್ನಿತರ ವಸ್ತುಗಳನ್ನು ಬಳಸದಂತೆ ನಿಷೇಧ ಹೇರಲಾಗಿದೆ.

ಇದಲ್ಲದೇ ಧರ್ಮಸ್ಥಳ ಗ್ರಾಮ ಪಂಚಾಯತ್, ನೇತ್ರಾವತಿ ಸ್ನಾನಘಟ್ಟ, ನೇತ್ರಾನಗರ, ಹರಿಕೆಮಂಡೆಯ ಸುತ್ತಮುತ್ತಲಿನ ಅಂಗಡಿಗಳಲ್ಲಿ ಶ್ಯಾಂಪೂ ಅಥವಾ ಸೋಪು ಮಾರದಂತೆ ಅಧಿಕೃತ ಸೂಚನೆಯನ್ನು ನೀಡಲಾಗಿದೆ. ಭಕ್ತಾಧಿಗಳು ಸ್ವಚ್ಟತೆಯನ್ನು ಕಾಪಾಡುವ ದೃಷ್ಟಿಯಿಂದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗಿದೆ.

- Advertisement -

Latest News

error: Content is protected !!