ಬೆಂಗಳೂರು :ಹೊಸ ಮರಳು ನೀತಿಗೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಪಟ್ಟಾ ಭೂಮಿ, ಕೆರೆ, ಗ್ರಾಮೀಣ ಭಾಗದ ಹಳ್ಳ ಪ್ರದೇಶಗಳಲ್ಲಿ ಮರಳು ತೆಗೆಯಲು ಅವಕಾಶ ಕೊಡುವ ನೂತನ ಮರಳು ನೀತಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಆಯಾ ತಾಲೂಕಿನಲ್ಲಿ ದಂಡಾಧಿಕಾರಿಗಳಾಗಿರುವ ತಹಶೀಲ್ದಾರ್ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರು ಮರಳು ತೆಗೆಯುವ ಪ್ರದೇಶ ಗುರುತಿಸಿ ಗ್ರಾಮ ಪಂಚಾಯತ್ ಒಪ್ಪಿಗೆಯೊಂದಿಗೆ ಅನುಮತಿ ನೀಡಲಿದ್ದಾರೆ.
ಪ್ರತಿ ಮೆಟ್ರಿಕ್ ಟನ್ ಮರಳಿಗೆ 700 ರೂಪಾಯಿ ದರ ನಿಗದಿ ಮಾಡಲಾಗಿದೆ. ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಸಚಿವ ಸಂಪುಟ ಸಭೆಯ ಬಳಿಕ ಈ ಕುರಿತು ಮಾಹಿತಿ ನೀಡಿದ್ದು, ಪ್ರತಿ ಮೆಟ್ರಿಕ್ ಟನ್ ಮರಳಿಗೆ 700 ರೂಪಾಯಿ ದರ ನಿಗದಿ ಮಾಡಲಾಗಿದೆ. ಮರಳು ಬ್ಲಾಕ್ ಗುರುತಿಸುವ ಮತ್ತು ಅದನ್ನು ಅಗತ್ಯ ಇರುವವರಿಗೆ ಒದಗಿಸುವ ಜವಾಬ್ದಾರಿಯನ್ನು ಸ್ಥಳೀಯ ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಗ್ರಾಮ ಪಂಚಾಯಿತಿ ಹಂತದಲ್ಲಿ ಮರಳು ಹಂಚಿಕೆ ಜವಾಬ್ದಾರಿ ಇರುತ್ತದೆ. ತಹಸೀಲ್ದಾರ್ ಮತ್ತು ಸಂಬಂಧಿಸಿದ ಅಧಿಕಾರಿಗಳು ಮರಳು ಗುರುತಿಸುವುದು, ವಿತರಣೆ ಸಂಬಂಧ ಕೆಲಸ ನಿರ್ವಹಿಸಲಿದ್ದಾರೆ. ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಹೊಸ ನೀತಿ ರೂಪಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ..
ನೂತನ ಮರಳು ನೀತಿ: ಮನೆ ಕಟ್ಟುವವರಿಗೆ ಭರ್ಜರಿ 'ಗುಡ್ ನ್ಯೂಸ್'
- Advertisement -
- Advertisement -
- Advertisement -