Saturday, June 6, 2026
Homeಕರಾವಳಿನವ ಮಂಗಳೂರು ಬಂದರು ಪ್ರಾಧಿಕಾರ: ನಾಳೆ ಸುವರ್ಣ ಮಹೋತ್ಸವ

ನವ ಮಂಗಳೂರು ಬಂದರು ಪ್ರಾಧಿಕಾರ: ನಾಳೆ ಸುವರ್ಣ ಮಹೋತ್ಸವ

- Advertisement -
- Advertisement -

ಮಂಗಳೂರು: ನವ ಮಂಗಳೂರು ಬಂದರು ಪ್ರಾಧಿಕಾರದ 50ನೇ ವರ್ಷದ ಸಂಭ್ರಮಾಚರಣೆಯ ಕಾರ್ಯಕ್ರಮವು ನ. 13 ರಂದು ಪಣಂಬೂರಿನ ಡಾ| ಬಿ.ಆರ್. ಅಂಬೇಡ್ಕರ್ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು  ಎನ್‌ಎಂಪಿಎ ಯ ಉಪಾಧ್ಯಕ್ಷೆ ಶಾಂತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರದ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೊನೋವಾಲ್ ಅವರು ಮಧ್ಯಾಹ್ನ 2.30 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಮೀನುಗಾರಿಕಾ, ಬಂದರು, ಜಲ ಸಾರಿಗೆ ಸಚಿವ ಮಾಂಕಾಳ ವೈದ್ಯ, ಸಂಸದ ಕ್ಯಾ| ಬ್ರಿಜೇಶ್ ಚೌಟ ಸಹಿತ ಹಲವು ಗಣ್ಯರು, ಎನ್ ಎಂಪಿಎ ಅಧ್ಯಕ್ಷ ವೆಂಕಟರಮಣ ಅಕ್ಕರಾಜು ಸಹಿತ ಪ್ರಮುಖರು ಭಾಗವಹಿಸುವರು ಎಂದರು.

ರಾಷ್ಟ್ರೀಯ ಸುರಕ್ಷತೆಯ ಹಿನ್ನೆಲೆಯಲ್ಲಿ ಎನ್‌ಎಂಪಿಎ ಒಳಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧವಿರುವ ಕಾರಣ, ಎನ್‌ಎಂಪಿಎ ಯ ಕಾರ್ಯಚಟುವಟಿಕೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ “ಜನರ ಬಳಿಗೆ ಬಂದರು’ ಎಂಬ ಪರಿಕಲ್ಪನೆಯಡಿ ಈ ಪ್ರದರ್ಶನ ನಡೆಯಲಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಎನ್‌ಎಂಪಿಎ ಉಪ ಸಂರಕ್ಷಕ ಮನೋಜ್ ಜೋಶಿ ಉಪಸ್ಥಿತರಿದ್ದರು.ನವ ಮಂಗಳೂರು ಬಂದರು ಪ್ರಾಧಿಕಾರ: ನಾಳೆ ಸುವರ್ಣ ಮಹೋತ್ಸವ

- Advertisement -

Latest News

error: Content is protected !!