Thursday, June 4, 2026
Homeಕರಾವಳಿಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಮನೋಜ್ ಕುಮಾರ್, ಉಪಮೇಯರ್ ಭಾನುಮತಿ

ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಮನೋಜ್ ಕುಮಾರ್, ಉಪಮೇಯರ್ ಭಾನುಮತಿ

- Advertisement -
- Advertisement -

ಮಂಗಳೂರು: ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಮೇಯರ್ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ.

ಗುರುವಾರ ಮಂಗಳೂರು ಪಾಲಿಕೆಯಲ್ಲಿ ಮೇಯರ್ ಉಪಮೇಯರ್ ಹುದ್ದೆಗೆ ಚುನಾವಣೆ ನಡೆಯಿತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ ಭಾಗವಹಿಸಿದ್ದರು.

ಮೇಯರ್ ಹುದ್ದೆಗೆ “ಎಸ್ ಸಿ” ಮೀಸಲಾತಿಯಡಿ ಕಾಂಗ್ರೆಸ್ ಅಭ್ಯರ್ಥಿಗಳು ಇಲ್ಲದೇ ಇರುವುದರಿಂದ ಮೇಯರ್ ಆಯ್ಕೆ ಅವಿರೋಧವಾಗಿ ನಡೆಯುವಂತಾಯಿತು.

- Advertisement -

Latest News

error: Content is protected !!