Wednesday, June 24, 2026
Homeತಾಜಾ ಸುದ್ದಿಹೊರ ರಾಜ್ಯದವರ 'ಕ್ವಾರಂಟೈನ್ ನಿಯಮ' ದಲ್ಲಿ ಬದಲಾವಣೆ

ಹೊರ ರಾಜ್ಯದವರ 'ಕ್ವಾರಂಟೈನ್ ನಿಯಮ' ದಲ್ಲಿ ಬದಲಾವಣೆ

- Advertisement -
- Advertisement -

ಬೆಂಗಳೂರು : ಕರ್ನಾಟಕ ಸರ್ಕಾರ ಹೊರ ರಾಜ್ಯದಿಂದ ಬರುವವರಿಗೆ ಇದ್ದ ಕ್ವಾರಂಟೈನ್ ನಿಯಮಗಳನ್ನು ಬದಲಾವಣೆ ಮಾಡಿದೆ. ಇನ್ನು ಮುಂದೆ ಎಲ್ಲರೂ ಹೋಂ ಕ್ವಾರಂಟೈನ್‌ನಲ್ಲಿರಬೇಕು. ಆದರೆ ಮಹಾರಾಷ್ಟ್ರದಿಂದ ಬರುವವರಿಗೆ ಇದು ಅನ್ವಯವಾಗುವುದಿಲ್ಲ. ಮಹಾರಾಷ್ಟ್ರದಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಎಂದು ಸಚಿವ ಆರ್.ಅಶೋಕ್ ಮಾಹಿತಿ ನೀಡಿದರು.

ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ ತಮಿಳುನಾಡು ಮತ್ತು ದೆಹಲಿಯಿಂದ ರಾಜ್ಯಕ್ಕೆ ಆಗಮಿಸುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಇರುವುದಿಲ್ಲ, ಅವರು 14 ದಿನದ ಹೋಂ ಕ್ವಾರಂಟೈನ್ ನಲ್ಲಿರಬೇಕು.

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರು 7 ದಿನ ಸಾಂಸ್ಥಿಕ ಕ್ವಾರಂಟೈನ್ ಮತ್ತು 7 ದಿನ ಹೋಂ ಕ್ವಾರಂಟೈನ್ ನಲ್ಲಿರಬೇಕು ಎಂದು ನಿಯಮ ಬದಲಾವಣೆ ಮಾಡಲಾಗಿದೆ. ಯಾವುದೇ ರಾಜ್ಯದಿಂದ ಬಂದರೂ ಕೂಡ ಕ್ವಾರಂಟೈನ್ ನಲ್ಲಿರಬೇಕು ಎಂದು ಮಾಹಿತಿ ನೀಡಿದರು.

- Advertisement -

Latest News

error: Content is protected !!