Friday, June 5, 2026
Homeಕರಾವಳಿಉಡುಪಿಮತ್ತೊಂದು ದಾಖಲೆ ಬರೆದ ಕಂಬಳದ ಉಸೆನ್ ಬೋಲ್ಟ್ ಶ್ರೀನಿವಾಸ ಗೌಡ

ಮತ್ತೊಂದು ದಾಖಲೆ ಬರೆದ ಕಂಬಳದ ಉಸೆನ್ ಬೋಲ್ಟ್ ಶ್ರೀನಿವಾಸ ಗೌಡ

- Advertisement -
- Advertisement -

ಉಡುಪಿ: ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಹೊಂದಿರುವ ಶ್ರೀನಿವಾಸ ಗೌಡ ಅವರು ಮತ್ತೊಂದು ದಾಖಲೆ ಬರೆದಿದ್ದಾರೆ.

ಉಡುಪಿ ಜಿಲ್ಲೆಯ ಕಕ್ಕೆಪದವುನಲ್ಲಿ ನಡೆದ ಕಂಬಳದಲ್ಲಿ 8.78 ಸೆಕೆಂಡ್ ನಲ್ಲಿ 100 ಮೀಟರ್ ಕ್ರಮಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ.  ಕಳೆದ ವಾರ ವೇಣೂರಿನಲ್ಲಿ ನಡೆದ ಕಂಬಳದಲ್ಲಿ 8.89 ಸೆಕೆಂಡ್ ನಲ್ಲಿ 100 ಮೀಟರ್ ಕಂಬಳ ಓಡಿಸಿ ಶ್ರೀನಿವಾಸ ಗೌಡ ದಾಖಲೆ ಮಾಡಿದ್ದರು. ತಮ್ಮದೇ ದಾಖಲೆಯನ್ನು ನಿನ್ನೆ ಹಿಂದಿಕ್ಕಿ ಹೊಸ ದಾಖಲೆ ನಿರ್ಮಿಸಿದ್ದರು.

ಮಿಜಾರು ಪ್ರಸಾದ್ ನಿಲಯದ ಶಕ್ತಿಪ್ರಸಾದ್ ಮಾಲೀಕರಾಗಿರುವ ಕೋಣಗಳನ್ನು ಓಡಿಸಿದ ಶ್ರೀನಿವಾಸಗೌಡ 8.78 ಸೆಕೆಂಡ್ ನಲ್ಲಿ 100 ಮೀಟರ್ ಓಡಿಸಿದ್ದಾರೆ. ಈ ಬಾರಿಯ ಕಂಬಳದ ಋತುವಿನಲ್ಲಿ ಅತಿ ಹೆಚ್ಚು ಅಂದರೆ 18 ಪದಕಗಳನ್ನು ಗಳಿಸಿದ್ದಾರೆ.

ಎರಡು ದಿನಗಳ ಕಾಲ ನಡೆದ ಕಕ್ಕೆಪದವು ಜೋಡುಕರೆ ಕಂಬಳದ ಒಂದೇ ಸ್ಪರ್ಧೆಯಲ್ಲಿ ಶ್ರೀನಿವಾಸ್ ಗೌಡ 6 ಪದಕಗಳನ್ನು ಪಡೆದು ಮತ್ತೊಂದು ಸಾಧನೆ ಮಾಡಿದ್ದಾರೆ.

- Advertisement -

Latest News

error: Content is protected !!