Thursday, March 28, 2024
Homeಕರಾವಳಿಉಡುಪಿಉಡುಪಿ: ಶಿರೂರು ಮಠಕ್ಕೆ ಉತ್ತರಾಧಿಕಾರಿ ಘೋಷಣೆ, ಮೇ 14ರಂದು ಪಟ್ಟಾಭೀಷೇಕ

ಉಡುಪಿ: ಶಿರೂರು ಮಠಕ್ಕೆ ಉತ್ತರಾಧಿಕಾರಿ ಘೋಷಣೆ, ಮೇ 14ರಂದು ಪಟ್ಟಾಭೀಷೇಕ

spot_img
- Advertisement -
- Advertisement -

ಉಡುಪಿ: ಹಲವಾರು ವರ್ಷಗಳಷ್ಟು ಇತಿಹಾಸ ಹೊಂದಿರುವ ಉಡುಪಿಯ ಶಿರೂರು ಮಠಕ್ಕೆ ಸೋದೆ ವಿಶ್ವವಲ್ಲಭ ತೀರ್ಥ ಶ್ರೀಪಾದರಿಂದ ಉತ್ತರಾಧಿಕಾರಿ ಘೋಷಣೆ ಮಾಡಲಾಗಿದೆ. ಮೇ 11 ರಿಂದ 14ರ ವರೆಗೆ ಪಟ್ಟಾಭಿಷೇಕ ಪ್ರಕ್ರಿಯೆ ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ನಿಡ್ಲೆ ಮೂಲದ ಡಾ|| ಎಂ.ಉದಯ್ ಕುಮಾರ್ ಸರಳತ್ತಾಯ ಮತ್ತು ಶ್ರೀವಿದ್ಯಾ ದಂಪತಿಯ ಪುತ್ರ 16 ವರ್ಷದ ವಟು ಅನಿರುದ್ಧ್ ಸರಳತ್ತಾಯ ಮಠಕ್ಕೆ ಉತ್ತರಾಧಿಕಾರಿಯಾಗಿದ್ದಾರೆ.

ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ವಟು ಅನಿರುದ್ಧ ಸರಳತ್ತಾಯ ಎಸ್‌ಎಸ್‌ಎಲ್‌ಸಿ ಯನ್ನು ಉಡುಪಿಯ ವಿದ್ಯೋದಯ ಹೈಸ್ಕೂಲಿನಲ್ಲಿ ಪೂರ್ಣಗೊಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಬಳಿಯಿರುವ ಸೋಂದೆ ಮೂಲ ಮಠದಲ್ಲಿ ಮೇ11ರಿಂದ 14ರವರೆಗೆ ಸನ್ಯಾಸ ಸ್ವೀಕಾರ, ಪಟ್ಟಾಭಿಷೇಕ ಮುಂತಾದ ಕಾರ್ಯಕ್ರಮಗಳು ನಡೆಯಲಿದೆ. ಅಷ್ಟಮಠಗಳಲ್ಲಿ ಬಾಲಸನ್ಯಾಸ ಸ್ವೀಕಾರ ಸಂಪ್ರದಾಯ ಇದೆ. ಸಂಪ್ರದಾಯದ ಪ್ರಕಾರವೇ ವಟುವಿನ ಆಯ್ಕೆ ನಡೆದಿದೆ.

- Advertisement -
spot_img

Latest News

error: Content is protected !!