- Advertisement -
- Advertisement -
ಬೆಂಗಳೂರು: ಏಪ್ರಿಲ್ 1ರಿಂದ ಹೊಸ ಟೋಲ್ ನೀತಿ ಜಾರಿಯಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿದ್ದು, ಈ ನಿಟ್ಟಿನಲ್ಲಿ ಕರ್ನಾಟಕದಾದ್ಯಂತ ಟೋಲ್ ಶುಲ್ಕ ಶೇ.5ರಷ್ಟು ಹೆಚ್ಚಾಗಲಿದೆ.
ಈ ಪರಿಷ್ಕೃತ ದರಗಳು ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ಟೋಲ್ಗಳಿಗೆ ಅನ್ವಯವಾಗಲಿದ್ದು, ಗರಿಷ್ಠ ಶೇ.5 ರಷ್ಟು ಮತ್ತು ಕನಿಷ್ಠ ಶೇ 3 ರಷ್ಟು ಹೆಚ್ಚಳವಾಗಲಿದೆ.
ಕರ್ನಾಟಕದಲ್ಲಿ ಟೋಲ್ ಪರಿಷ್ಕೃತ ದರವು ಬೆಂಗಳೂರು-ಮೈಸೂರು ಮಾರ್ಗದ ಕನಮಿಣಿಕೆ ಮತ್ತು ಶೇಷಗಿರಿಹಳ್ಳಿ, ಬೆಂಗಳೂರು-ತಿರುಪತಿ ಮಾರ್ಗದ ನಂಗ್ಲಿ, ಬೆಂಗಳೂರು-ಹೈದರಾಬಾದ್ ಮಾರ್ಗದ ಬಾಗೇಪಲ್ಲಿ, ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯ ಸಾದಹಳ್ಳಿ, ಮತ್ತು ಹುಲಿಕುಂಟೆ ಹಾಗೂ ನಲ್ಲೂರು ದೇವನಹಳ್ಳಿ (ಸ್ಯಾಟಲೈಟ್ ಟೌನ್ ರಿಂಗ್ ರೋಡ್) ಟೋಲ್ ಪ್ಲಾಜಾಗಳಲ್ಲಿ ದರಗಳು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
- Advertisement -