Wednesday, May 15, 2024
Homeತಾಜಾ ಸುದ್ದಿಮಂಗಳೂರಿನಿಂದ ರಾಮೇಶ್ವರ, ಭಾವ್‌ನಗರಕ್ಕೆ ಹೊಸ ರೈಲು ಸಂಚಾರ ಶೀಘ್ರ ಆರಂಭ

ಮಂಗಳೂರಿನಿಂದ ರಾಮೇಶ್ವರ, ಭಾವ್‌ನಗರಕ್ಕೆ ಹೊಸ ರೈಲು ಸಂಚಾರ ಶೀಘ್ರ ಆರಂಭ

spot_img
- Advertisement -
- Advertisement -

ಮಂಗಳೂರು: ಕರಾವಳಿಯ ಜನರಿಗೆ ಅತೀ ಉಪಯುಕ್ತವಾಗುವ ಮಂಗಳೂರು -ರಾಮೇಶ್ವರ ಮತ್ತು ಮಂಗಳೂರು – ಭಾವ್‌ನಗರ (ಅಹ್ಮದಾಬಾದ್) ಹೊಸ ರೈಲು ಸಂಚಾರ ಆರಂಭದ ಪ್ರಸ್ತಾವನೆ ಇತ್ತೀಚೆಗೆ ನಡೆದ ಅಂತರ್ ರೈಲ್ವೇ ವಲಯ ವೇಳಾಪಟ್ಟಿ ಸಮ್ಮೇಳನ (ಐಆರ್‌ಟಿಟಿಸಿ)ದಲ್ಲಿ ಅನುಮೋದನೆಗೊಂಡಿದೆ. ದಕ್ಷಿಣ ರೈಲ್ವೇಯ ರೈಲ್ವೇ ಸಾರಿಗೆ ವಿಭಾಗದ ಚೆನ್ನೈ ಕೇಂದ್ರ ಕಚೇರಿ ನೀಡಿರುವ ಮಾಹಿತಿಯಂತೆ ಮಂಗಳೂರಿನಿಂದ ಭಾವ್‌ನಗರ ಟರ್ಮಿನಸ್ ಮತ್ತು ಮಂಗಳೂರಿನಿಂದ ರಾಮೇಶ್ವರಕ್ಕೆ ಸಾಪ್ತಾಹಿಕ ರೈಲು ಸಂಚಾರ ನಡೆಸಲಿದೆ.

ಪ್ರಸ್ತುತ ಕಣ್ಣೂರಿನಿಂದ ಮಂಗಳೂರು ಸೆಂಟ್ರಲ್ ಮೂಲಕ ಬೆಂಗಳೂರಿಗೆ ಸಂಚರಿಸುತ್ತಿರುವ ರೈಲು ನಂ.16511/16512 ಕಣ್ಣೂರು- ಬೆಂಗಳೂರು ಎಕ್ಸ್ ಪ್ರೆಸ್ ರೈಲನ್ನು ಕಲ್ಲಿಕೋಟೆಯವರೆಗೆ ವಿಸ್ತರಿಸುವ ಪ್ರಸ್ತಾವವನ್ನು ಕೂಡ ಐಆರ್‌ಟಿಟಿಸಿ ಸಭೆ ಪರಿಶೀಲಿಸಿದ್ದು, ರೈಲ್ವೆ ಮಂಡಳಿಗೆ ಶಿಫಾರಸು ಮಾಡಿದೆ. ಐಆರ್‌ಟಿಟಿಸಿ ಮಾಡುವ ಶಿಫಾರಸುಗಳು ಅನುಷ್ಠಾನಗೊಳ್ಳದೆ ಇರುವುದು ಕಡಿಮೆ. ಹೀಗಾಗಿ ಈ ಎರಡು ನೂತನ ರೈಲುಗಳು ಮೂರು ತಿಂಗಳುಗಳ ಒಳಗೆ ಆರಂಭಗೊಳ್ಳುವ ಸಾಧ್ಯತೆಗಳು ಅಧಿಕ ಎಂದು ಮೂಲಗಳು ತಿಳಿಸಿವೆ.

ಕರಾವಳಿಗರ ಬಹುದಿನಗಳ ಬೇಡಿಕೆ ರಾಮೇಶ್ವರ, ಮಧುರೈ, ಪಳನಿ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾಕ್ಷೇತ್ರಗಳು. ಕರಾವಳಿಯಿಂದ ಇಲ್ಲಿಗೆ ದಿನಂಪ್ರತಿ ಗಣನೀಯ ಸಂಖ್ಯೆಯ ಯಾತ್ರಾರ್ಥಿಗಳು ತೆರಳುತ್ತಾರೆ. ಪ್ರಸ್ತುತ ಕರಾವಳಿಯಿಂದ ಇಲ್ಲಿಗೆ ನೇರ ರೈಲು ಸಂಚಾರ ಇಲ್ಲ.

- Advertisement -
spot_img

Latest News

error: Content is protected !!