Wednesday, March 26, 2025
Homeಅಪರಾಧಬಸ್ ನಿಲ್ದಾಣದ ಶೌಚಾಲಯದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ; ನೈರ್ಮಲ್ಯ ಕಾರ್ಯಕರ್ತರಿಂದ ಮಗುವಿನ ರಕ್ಷಣೆ

ಬಸ್ ನಿಲ್ದಾಣದ ಶೌಚಾಲಯದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ; ನೈರ್ಮಲ್ಯ ಕಾರ್ಯಕರ್ತರಿಂದ ಮಗುವಿನ ರಕ್ಷಣೆ

spot_img
- Advertisement -
- Advertisement -

ತಮಿಳುನಾಡಿನ ಮೈಲಾಡುತುರೈ ಹೊಸ ಬಸ್ ನಿಲ್ದಾಣದಲ್ಲಿ ನವಜಾತ ಹಣ್ಣು ಶಿಶುವೊಂದನ್ನು ಹುಟ್ಟಿದ ಕೆಲವೇ ಗಂಟೆಗಳಲ್ಲಿ ಸಾರ್ವಜನಿಕ ಶೌಚಾಲಯದಲ್ಲಿ ಬಿಟ್ಟು ಹೋಗಿರುವ ಆಘಾತಕಾರಿ ಘಟನೆ ಅ.10 ಗುರುವಾರದಂದು ನಡೆದಿದೆ.

ಬಸ್ ನಿಲ್ದಾಣದಲ್ಲಿ ಶೌಚಾಲಯ ಸ್ವಚ್ಛಗೊಳಿಸಲು ಬಂದಿದ್ದ ಸಿಬಂದಿ ಕಣ್ಣಿಗೆ ಮಗು ಕಂಡಿದ್ದು, ಕೂಡಲೇ ರಕ್ಷಣೆ ಮಾಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ. ಮಗು ಕೆಲವೇ ಗಂಟೆಗಳ ಮೊದಲು ಜನಿಸಿದ್ದಾಗಿ ಮಗುವನ್ನು ತಪಾಸಣೆ ನಡೆಸಿದ ವೈದ್ಯರು ಹೇಳಿದ್ದಾರೆ. ಮಗುವಿನ ಅರೋಗ್ಯ ಸ್ಥಿತಿ ಸ್ಥಿರವಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ವೈದ್ಯರ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತಂತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಗುವಿನ ಪೋಷಕರ ಪತ್ತೆಗೆ ಬಲೆ ಬೀಸಿದ್ದು ಯಾವ ಉದ್ದೇಶಕ್ಕಾಗಿ ಈ ಕೃತ್ಯ ಎಸಗಿದ್ದಾರೆ ಎಂಬ ಕುರಿತು ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!