Saturday, May 4, 2024
Homeತಾಜಾ ಸುದ್ದಿಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ

spot_img
- Advertisement -
- Advertisement -

ಬೆಂಗಳೂರು: ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಅವರು ಸಂಪೂರ್ಣವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಸಿ. ಟಿ. ರವಿ ಅವರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ರಾಜೀನಾಮೆ ಪತ್ರವನ್ನು ರವಾನೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ಪತ್ರವನ್ನು ಕಳಿಸಿದ ಬಳಿಕ ರಾಜೀನಾಮೆ ಅಂಗೀಕಾರವಾಗಲಿದೆ.

ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ದಿನವೇ ಗಾಂಧೀ ಜಯಂತಿ ಮುಗಿದ ಬಳಿಕ ರಾಜೀನಾಮೆ ನೀಡುವುದಾಗಿ ಅವರು ಹೇಳಿದ್ದರು. ಶನಿವಾರ ಬೆಳಗ್ಗೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ರವಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೈಗೊಂಡಿರುವ ಪ್ರಗತಿಯ ವರದಿ ಹಾಗೂ ಇನ್ನೂ ಬಾಕಿ ಉಳಿದಿರುವ ಕೆಲಸಗಳ ವಿವರಗಳನ್ನು ಒಳಗೊಂಡ ಪುಸ್ತಕದ ಜತೆಗೆ ರಾಜೀನಾಮೆ ಸಹ ಸಲ್ಲಿಸಿದರು. ಆದರೆ ರಾಜೀನಾಮೆಯನ್ನು ಅಂಗೀಕರಿಸದ ಯಡಿಯೂರಪ್ಪ, ದಸರಾ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳು ಮುಗಿಯುವ ತನಕ ಮುಂದುವರಿಯುವಂತೆ ಸೂಚನೆ ನೀಡಿದರೆನ್ನಲಾಗಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸಿ . ಟಿ . ರವಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಿ.ಟಿ.ರವಿ, ಪೂರ್ವನಿಗದಿಯಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮುಂದಿನದ್ದು ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ. ನಾಳೆ ದೆಹಲಿಯಲ್ಲಿ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಬಹುಶಃ ನಾಳೆ ಪದಾಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!