Friday, May 17, 2024
Homeಕರಾವಳಿಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ನವ ವಿವಾಹಿತೆ ಆತ್ಮಹತ್ಯೆ

ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ನವ ವಿವಾಹಿತೆ ಆತ್ಮಹತ್ಯೆ

spot_img
- Advertisement -
- Advertisement -

ಬಂಟ್ವಾಳ: ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಬಂಟ್ವಾಳ ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ (22)ಆತ್ಮಹತ್ಯೆ ಮಾಡಿಕೊಂಡವರು. ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹ ವಾಗಿದ್ದರು. ವಿವಾಹ ಸಂದರ್ಭದಲ್ಲಿ 18 ಪವನ್ ಚಿನ್ನವನ್ನು ನೀಡಲಾಗಿತ್ತು. ಆದರೆ ಹುಡುಗಿ ಕಡೆಯವರು ನೀಡಿದ ವರದಕ್ಷಿಣೆ ಕಡಿಮೆಯಾಗಿದೆ. ಲವ್ ಮಾಡಿ ಮದುವೆಯಾದರಿಂದ ಒಳ್ಳೆ ಹುಡುಗಿ ಸಿಗಲಿಲ್ಲ, ಇಲ್ಲದಿದ್ದರೆ ಒಳ್ಳೆಯ ಹುಡುಗಿ ಸಿಗಬಹುದಿತ್ತು ಎಂದು ಅತ್ತೆ ಝೂಬೈದಾ, ಮಗಳು ಅಜ್ಮೀಯಾ ಮತ್ತು ಗಂಡ ಸೇರಿಕೊಂಡು ಹೀಯಾಳಿಸಿದ್ದಲ್ಲದೆ,ಮಾನಸಿಕ ಕಿರುಕುಳ ಕೊಡುತ್ತಿದ್ದರು. ಈ ಕಾರಣಕ್ಕಾಗಿ ತಂಗಿ ಉಳ್ಳಾಲದ ಗಂಡನ ಮನೆಯಿಂದ ಸಜೀಪ ತಾಯಿ ಮನೆಗೆ ಬಂದಿದ್ದಳು.ಮಾನಸಿಕವಾಗಿ ನೊಂದಿದ್ದ ತಂಗಿ ನೌಸೀನ ಆ.25 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಾವಿನ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ನಾಸೀರ್ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಇನ್ನು ಅಜ್ಮಾನ ಮದುವೆಯಾದ ಕೆಲವೇ ದಿನಗಳಲ್ಲಿ ನೌಸೀನ್ ಳ ಒಡವೆಗಳನ್ನು ಮಾರಿದ್ದಾನೆ. ಜೊತೆಗೆ ಇನ್ನಷ್ಟು ಒಡವೆಗಳನ್ನು ತರುವಂತೆ ಪೀಡಿಸುತ್ತಿದ್ದ. ಇದು ಅಲ್ಲದೆ,ಅತ್ತೆ ಮತ್ತು ನಾದಿನಿಯವರು ಲವ್ ಮ್ಯಾರೇಜ್ ಆಗಿರುವ ಕಾರಣಕ್ಕಾಗಿ ಮಾನಸಿಕವಾಗಿ ಹಿಂಸೆಯನ್ನು ನೀಡುತ್ತಿದ್ದರು. ಈ ವಿಚಾರವನ್ನು ಮನೆಯವರಲ್ಲಿ ತಿಳಿಸಿದ್ದಳು. ಮನೆಯವರ ಕಿರುಕುಳ ತಾಳಲಾರದೆ ನೌಸೀನ್ ಅ.24 ರಂದು ತಾಯಿ ಮನೆಗೆ ಬಂದಿದ್ದಳು. ಮರುದಿನ ಮನೆಯವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಇವಳು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಇವಳ ಸಾವಿಗೆ ಗಂಡ ಮತ್ತು ಅತ್ತೆ,ನಾದಿನಿಯವರೇ ಕಾರಣ ಹಾಗಾಗಿ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ನೌಸೀನ್ ಳ ಸಾವಿಗೆ ನ್ಯಾಯ ಒದಗಿಸಬೇಕು ಎಂದು ನೌಸೀನ್ ಳ ಸಂಬಂಧಿ ಸಿದ್ದೀಕ್ ಒತ್ತಾಯ ಮಾಡಿದ್ದಾರೆ.

- Advertisement -
spot_img

Latest News

error: Content is protected !!