- Advertisement -
- Advertisement -
ಚಿಕ್ಕಮಗಳೂರು: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಮದುವೆಯಾಗಿ ಕೇವಲ ಐದು ದಿನಗಳಾಗಿದ್ದ ನವವಿವಾಹಿತ ಮೃತಪಟ್ಟ ದಾರುಣ ಘಟನೆ ಶೃಂಗೇರಿ ತಾಲೂಕಿನ ಮೆಣಸೆ ಬಳಿ ಸೋಮವಾರ (ಅ.26) ನಡೆದಿದೆ.
ಮೃತರನ್ನು ಕುಂಚೇಬೈಲು ನಿವಾಸಿ ನಾಗರಾಜ್ (32) ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಬೈಕ್ಗೆ ಬೆಂಕಿ ಹೊತ್ತಿಕೊಂಡಿದ್ದು, ಸವಾರನಿಗೂ ಬೆಂಕಿ ತಗುಲಿ ಗಂಭೀರ ಸುಟ್ಟ ಗಾಯಗಳಿಂದ ಮೃತಪಟ್ಟಿದ್ದಾರೆ. ಇತ್ತ ಜಯಪುರದಿಂದ ಶೃಂಗೇರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಇಳಿದಿದೆ.
- Advertisement -


