Wednesday, April 24, 2024
Homeತಾಜಾ ಸುದ್ದಿರಾಜ್ಯದ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

ರಾಜ್ಯದ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

spot_img
- Advertisement -
- Advertisement -

ಬೆಂಗಳೂರು: ಕೊರೋನಾ ವೈರಸ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಲಾಕ್ ಡೌನ್ ನಿಂದಾಗಿ ನಿಗಧಿತ ಸಮಯಕ್ಕೆ 2020-21ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇದಕ್ಕಾಗಿ ಮಾಸ್ಟರ್ ಫ್ಲಾನ್ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಮುಂದಿನ ಶೈಕ್ಷಣಿಕ ವರ್ಷವನ್ನು ಸರಿದೂಗಿಸುವ ಸಂಬಂಧ ಶಾಲಾ ಪಠ್ಯಗಳ ಸಿಲಬಸ್ ಕಡಿತಕ್ಕೆ ಚಿಂತನೆ ಮಾಡಲಾಗಿದೆ. ಈ ಮೂಲಕ ಶೈಕ್ಷಣಿಕ ವರ್ಷವನ್ನು ಸರಿದೂಗಿಸುವ ಬಿಗ್ ಪ್ಲಾನ್ ಮಾಡಿದೆ.

ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಶೈಕ್ಷಣಿಕ ತಜ್ಞರೊಂದಿಗೆ, ಹಿರಿಯ ಅಧಿಕಾರಿಗಳ ಜೊತೆಗೆ ಇಂದು ಸಭೆ ನಡೆಸಿರುವ ಅವರು, ಕೋವಿಡ್ ನಿಂದಾಗಿ ನಿಗದಿತ ದಿನಾಂಕಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಸಾಧ್ಯತೆಗಳು ಕಡಿಮೆ ಇದೆ. ಹೀಗಾಗಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಸರಿಹೊಂದುವಂತೆ ಅಗತ್ಯವಿರುವುದರಿಂದ ಶಾಲಾ ಶೈಕ್ಷಣಿಕ ಪಠ್ಯವನ್ನು ಆ ಅವಧಿಗೆ ತಕ್ಕಂತೆ ರೂಪಿಸಬೇಕೆಂದು ಶಿಕ್ಷಣ ಇಲಾಖೆಗೆ ಸೂಚಿಸಿದ್ದಾರೆ.

ಹೀಗಾಗಿ 2020-21ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ 1ರಿಂದ 10ನೇ ತರಗತಿ ಹಾಗೂ ಪದವಿ ಪೂರ್ವ ಶಿಕ್ಷಣದ ಪಠ್ಯಕ್ರಮದಲ್ಲಿ ಹೆಚ್ಚುವರಿ ಎನ್ನುವ ಪಠ್ಯವನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಹಿನ್ನಲೆಯಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿನ ಅವಧಿಯ ಆಧಾರದ ಮೇಲೆ, ಮಕ್ಕಳ ಕಲಿಕೆಗೆ ಹೊರೆಯಾಗದ ರೀತಿಯಲ್ಲಿ ಅವಶ್ಯಕ ಪುನರಾವರ್ತಿತವಾದ ಪಠ್ಯಕ್ಕೆ, ಪಠ್ಯ ಕ್ರಮದಲ್ಲಿ ಈ ವರ್ಷ ಕತ್ತರಿ ಬೀಳಲಿದೆ. ಅಲ್ಲದೇ ಪ್ರತಿ ತರಗತಿ, ಪ್ರತಿ ವಿಷಯಕ್ಕೆ ಸಂಬಂಧಿಸಿದಂತೆ 15 ದಿನಗಳ, 1 ತಿಂಗಳ, ಒಂದೂವರೆ ತಿಂಗಳ, 2 ತಿಂಗಳ ಹಂತಕ್ಕೆ ಹೆಚ್ಚುವರಿಯಾಗುವಂತ ಪಠ್ಯವನ್ನು ಗುರ್ತಿಸಿ ಕೈಬಿಡುವ ಸಂಬಂಧ ವಿಸ್ತೃತ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೋ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣದಲ್ಲಿನ ಅನೇಕ ಪಠ್ಯಗಳಿಗೆ ಕತ್ತರಿ ಪ್ರಯೋಗ ಆಗಲಿದೆ.

- Advertisement -
spot_img

Latest News

error: Content is protected !!