Wednesday, June 26, 2024
Homeತಾಜಾ ಸುದ್ದಿಮುಂದಿನ ಚುನಾವಣೆಯೇ ಕೊನೆಯ ಚುನಾವಣೆ: ಮೈಸೂರಿನಲ್ಲಿ ಸಿದ್ದರಾಮಯ್ಯ ಘೋಷಣೆ

ಮುಂದಿನ ಚುನಾವಣೆಯೇ ಕೊನೆಯ ಚುನಾವಣೆ: ಮೈಸೂರಿನಲ್ಲಿ ಸಿದ್ದರಾಮಯ್ಯ ಘೋಷಣೆ

spot_img
- Advertisement -
- Advertisement -

ಮೈಸೂರು: ಮುಂದಿನ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ ಎಂದಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಗಾಗಿ ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಬಾದಾಮಿ ಮತ್ತು ಕೋಲಾರ ಕ್ಷೇತ್ರಗಳ ಜನ ಕೇಳುತ್ತಿದ್ದಾರೆ. ಆದರೆ ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂದು ಇನ್ನೂ ತೀರ್ಮಾನ ಮಾಡಿಲ್ಲ ಅಂತಾ ಸಿದ್ದರಾಮನ ಹುಂಡಿಯಲ್ಲಿ ಸಿದ್ಧರಾಮಯ್ಯ ಹೇಳಿಕೆ‌ ನೀಡಿದ್ದಾರೆ.

ಎಲ್ಲಿ ನನಗೆ ರಾಜಕೀಯ ಪುನರ್ ಜನ್ಮ ಸಿಕ್ಕಿತೋ ಅಲ್ಲಿಯೇ ಸೋಲಿಸಿದರು, ಹಾಗಂತ ಬೇಸರ ಮಾಡಿಕೊಳ್ಳುವುದಕ್ಕೆ ಆಗುವುದಿಲ್ಲ,
ಬರೋಬ್ಬರಿ ಐದು ಬಾರಿ ಚಾಮುಂಡೇಶ್ವರಿ ಜನ ನನ್ನನ್ನು ಗೆಲ್ಲಿಸಿದ್ದಾರೆ, ಅದಕ್ಕಾಗಿ ಚಾಮುಂಡೇಶ್ವರಿಯನ್ನು ನಾನು ಯಾವಾಗಲೂ ಮರೆಯಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಲ್ಲದೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದ್ದು, ಎಲ್ಲಿ ಸ್ಫರ್ಧೆ ಎಂದ ಕುರಿತು ಮುಂದೆ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂದು
ಮೈಸೂರು ತಾಲೂಕಿನ ಸಿದ್ದರಾಮನಹುಂಡಿಯಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

- Advertisement -
spot_img

Latest News

error: Content is protected !!