Thursday, June 4, 2026
Homeತಾಜಾ ಸುದ್ದಿರಾಮೇಶ್ವರ ಕೆಫೆ ಬಾಂಬ್ ಸ್ಫೋಟದ ಆರೋಪಿಯ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಿಸಿದ ಎನ್...

ರಾಮೇಶ್ವರ ಕೆಫೆ ಬಾಂಬ್ ಸ್ಫೋಟದ ಆರೋಪಿಯ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಿಸಿದ ಎನ್ ಐಎ

- Advertisement -
- Advertisement -

ಬೆಂಗಳೂರು : ರಾಮೇಶ್ವರ ಕೆಫೆ ಬಾಂಬ್ ಸ್ಫೋಟದ ಆರೋಪಿಯ ಸುಳಿವು ನೀಡಿದವರಿಗೆ ಎನ್ ಐಎ 10 ಲಕ್ಷ ಬಹುಮಾನ ಘೋಷಿಸಿದೆ.ಪ್ರಕರಣದ ತನಿಖೆ ವಹಿಸಿಕೊಳ್ಳುವ ಮುನ್ನವೇ ಸಿಸಿಬಿ ನಡೆಸಿದ್ದ ತನಿಖೆ ವೇಳೆ ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಫೋಟೋ ಪತ್ತೆಯಾಗಿತ್ತು. ಇದೀಗ ಆ ಫೋಟೋವನ್ನು ಎನ್​ಐಎ ಬಿಡುಗಡೆ ಮಾಡಿದೆ. ಅಲ್ಲದೇ ಆರೋಪಿ ಬಗ್ಗೆ ತಿಳಿದರೆ ಕೂಡಲೇ 080-29510900, 8904241100 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಎನ್ಐಎ ಸಾರ್ವಜನಿಕರಲ್ಲಿ ಮನವಿ ಮಾಡಿದೆ.


ರಾಷ್ಟ್ರೀಯ ತನಿಖಾ ದಳ ಎನ್‌ಐಎ ಅಧಿಕಾರಿಗಳು ಮಂಗಳವಾರ ಬೆಂಗಳೂರು, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸೈಯದ್ ಖೈಲ್, ಮೂಲತಃ ಕೇರಳ ಇಡುಕ್ಕಿ ನಿವಾಸಿ, ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬಿಜು ಅಬ್ರಹಾಂ ಹಾಗೂ ಅತ್ತಾವರ ಗ್ರಾಮದ ನಬೀದ್ ಎಂಬಾತನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ಕೈಗೊಂಡಿದ್ದಾರೆ. ಇದೀಗ ಆರೋಪಿಯ ಬಗ್ಗೆ ಸುಳಿವು ನೀಡಿದವರಿಗೆ ಎನ್ ಐ ಎ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.

- Advertisement -

Latest News

error: Content is protected !!