Thursday, June 4, 2026
Homeಕರಾವಳಿಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ ಎನ್ ಐಎ ವಹಿಸುವ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ; ಬೆಂಗಳೂರಿನಲ್ಲಿ...

ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ ಎನ್ ಐಎ ವಹಿಸುವ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ; ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

- Advertisement -
- Advertisement -

ಬೆಂಗಳೂರು: ಮಂಗಳೂರು ಸ್ಪೋಟ ಪ್ರಕರಣವನ್ನು ಎನ್ ಐಎ ತನಿಖೆಗೆ ವಹಿಸುವ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಸಿಎಂ, ತನಿಖೆ ಚುರುಕುಗೊಂಡಿದ್ದು, ಆರೋಪಿಯ ವೈಯಕ್ತಿಕ ಮಾಹಿತಿ ಪೊಲೀಸರು ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಅಲ್ಲದೇ ಹಳೆಯ ಕೇಸ್ ಗಳು ಮತ್ತು ಸಂಪರ್ಕ ಜಾಲದ ಜಾಡು ಹಿಡಿದು ಮುಂದಿನ ತನಿಖೆ ನಡೆಯುತ್ತಿದ್ದು, ಹಲವು ಕಡೆ ಕೃತ್ಯ ಎಸಗಿದ್ದಾನೆಯೇ, ಬೇರೆ ಯಾವ ಸಂಘಟನೆಗಳ‌ ಜತೆ ಸಂಪರ್ಕದಲ್ಲಿದ್ದಾನೆ ಅಂತ ತನಿಖೆ ನಡೆಯುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಘಟನೆ ಸಂಬಂಧ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಿದ್ದೇನೆ ಎಂದು ಹೇಳಿರುವ ಬೊಮ್ಮಾಯಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲ ಎಂಬ ಸಿದ್ದರಾಮಯ್ಯ ಆರೋಪ ರಾಜಕೀಯ ಪ್ರೇರಿತವಾಗಿದ್ದು ಅದಕ್ಕೆ ಹೆಚ್ಚಿನ ಮಹತ್ವ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!