Tuesday, June 30, 2026
Homeಕರಾವಳಿಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶಾಂತಿ ಸಭೆ

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶಾಂತಿ ಸಭೆ

- Advertisement -
- Advertisement -

ಮಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು ಶಾಂತಿ ಸಭೆ ನಡೆಯಿತು.‌

ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಎಸ್ಪಿ ರಿಷ್ಯಂತ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಧರ್ಮಗಳ ಮುಖಂಡರು ಶಾಂತಿ ಸಭೆಯಲ್ಲಿ ಭಾಗಿಯಾಗಿದ್ದರು‌.

ಕಾನೂನು ಕೈಗೆತ್ತಿಕೊಳ್ಳುವವರ ಮೇಲೆ ಗಂಭೀರ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಪೊಲೀಸ್ ಆಯುಕ್ತರು ಸಭೆಯಲ್ಲಿ ನೀಡಿದ್ದು,
ಕಮಿಷನರೇಟ್ ವ್ಯಾಪ್ತಿಯಲ್ಲಿ ಚೆಕ್ ಪೋಸ್ಟ್ ವ್ಯವಸ್ಥೆಯನ್ನು ಮಾಡಿರುವುದಾಗಿ ಹೇಳಿದ್ದಾರೆ.

ಅಲ್ಲದೇ ಯಾವುದೇ ಸಂಘಟನೆ ಕೂಡಾ ಕಾನೂನು ಕೈಗೆತ್ತಿಕೊಂಡರೆ ಅವರ ಮೇಲೆ ತೆಗೆದುಕೊಳ್ಳಲಾಗುತ್ತದೆ ಎಂದು ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ. ಜೂನ್ 29 ರಂದು ಬಕ್ರೀದ್ ಹಬ್ಬದ ಆಚರಣೆ ನಡೆಯಲಿದೆ.

- Advertisement -

Latest News

error: Content is protected !!