Wednesday, July 15, 2026
Homeಕೊಡಗುಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಕೊಡಗು ಜಿಲ್ಲೆಯ ವಿವಿಧೆಡೆ ಎನ್ಐಎ ದಾಳಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಕೊಡಗು ಜಿಲ್ಲೆಯ ವಿವಿಧೆಡೆ ಎನ್ಐಎ ದಾಳಿ

- Advertisement -
- Advertisement -

ಮಡಿಕೇರಿ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ ಕೂಡಾ ಎನ್ ಐಎ ದಾಳಿ ನಡೆದಿದೆ.

ಇಂದು ಬೆಳಗ್ಗೆ ಮಡಿಕೇರಿ ನಗರದ ಮುಸ್ತಾಫಾ, ಸೋಮವಾರಪೇಟೆ ತಾಲೂಕಿನ ಹೊಸತೋಟ ನಿವಾಸಿಯಾಗಿರುವ ಜುನೈದ್ ಮತ್ತು ಚೌಡ್ಲು ಗ್ರಾಮದ ತೌಶಿಕ್ ಮನೆಗಳ ಮೇಲೆ‌ ದಾಳಿ ನಡೆದಿದೆ.

ಇಂದು ಮುಂಜಾನೆ ಏಕಕಾಲಕ್ಕೆ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮೂವರ ಮನೆಗಳಲ್ಲಿಯೂ ದಾಖಲೆಗಳ ಶೋಧ ನಡೆಸಿ ತೆರಳಿದ್ದಾರೆ.

ಇದೇ ವೇಳೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಮತ್ತು ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿಯೂ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.2022ರ ಜುಲೈ 26 ರಂದು ಸಂಜೆ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು

- Advertisement -

Latest News

error: Content is protected !!