ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಅಬೂಬಕ್ಕರ್ ಸಿದ್ದಿಕ್ ಪತ್ನಿ ಮನೆ ಮೇಲೆ ಎನ್ ಐಎ ದಾಳಿಯಾಗಿದೆ.
ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿದ ಬಳಿಕ ಆರೋಪಿಗಳು ಪರಾರಿಯಾಗಲು ಸಹಕರಿಸಿದ ಆರೋಪ ಅಬೂಬಕ್ಕರ್ ಸಿದ್ದಿಕ್ ಮೇಲಿದೆ. ಕೊಲೆಯಾದಾಗ ಅಬೂಬಕ್ಕರ್ ಸಿದ್ದಿಕ್ ಸ್ಥಳದಲ್ಲೇ ಇದ್ದ ಎನ್ನಲಾಗಿದೆ. , ಸದ್ಯ ತಲೆ ಮರೆಸಿಕೊಂಡಿದ್ದಾನೆ.
ಇದೀಗ ಸರ್ಚ್ ವಾರೆಂಟ್ ಪಡೆದ ಎನ್ ಐ ಎ ಪೋಲೀಸರು, ಸಂಪ್ಯ ಠಾಣಾ ವ್ಯಾಪ್ತಿಯ ಕೆಯ್ಯೂರಿಗೆ ಆಗಮಿಸಿ ತನಿಖೆಗೆ ನಡೆಸುತ್ತಿದ್ದಾರೆ.
ಅತ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್ (27) ಮನೆಗೂ ಬೆಂಗಳೂರಿನಿಂದ ಬಂದ ಐದು ಜನರ ಎನ್.ಐ.ಎ ತಂಡ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ.
ನೌಷದ್ ಪತ್ತೆಗಾಗಿ ಎನ್.ಐ.ಎ 2 ಲಕ್ಷ ರಿವಾರ್ಡ್ ಘೋಷಣೆ ಮಾಡಿತ್ತು. ಎನ್.ಐ.ಎ ಅಧಿಕಾರಿಗಳಿಗೆ ಬೆಳ್ತಂಗಡಿ ಪೊಲೀಸರು ಸಾಥ್ ನೀಡಿದ್ದಾರೆ.