Thursday, June 4, 2026
Homeಕರಾವಳಿಉಳ್ಳಾಲದಲ್ಲಿ ಎನ್‌ಐಎಯಿಂದ ದಾಳಿ ಪ್ರಕರಣ: ಓರ್ವನನ್ನು ವಶಕ್ಕೆ ಪಡೆದ ತನಿಖಾ ದಳ

ಉಳ್ಳಾಲದಲ್ಲಿ ಎನ್‌ಐಎಯಿಂದ ದಾಳಿ ಪ್ರಕರಣ: ಓರ್ವನನ್ನು ವಶಕ್ಕೆ ಪಡೆದ ತನಿಖಾ ದಳ

- Advertisement -
- Advertisement -

ಮಂಗಳೂರು: ಉಳ್ಳಾಲದ ಮಾಸ್ತಿಕಟ್ಟೆ ನಿವಾಸಿಯಾಗಿರುವ ಬಿ. ಎಂ. ಬಾಷಾ ಅವರ ನಿವಾಸಕ್ಕೆ ಎನ್ ಐಎ ಯಿಂದ ದಾಳಿ ನಡೆಸಿದ ಬಳಿಕ ಓರ್ವನನ್ನು ವಶಕ್ಕೆ ಪಡೆಯಲಾಗಿದೆ.

ಉಳ್ಳಾಲದ ಮಾಸ್ತಿಕಟ್ಟೆ ನಿವಾಸಿಯಾಗಿರುವ ಬಿ. ಎಂ. ಬಾಷಾ ಅವರ ನಿವಾಸಕ್ಕೆ ಸುಮಾರು 20 ಮಂದಿಯ ಎನ್‌ಐಎ ತಂಡ ಮುಂಜಾನೆ 5.30ಕ್ಕೆ ದಾಳಿ ಮಾಡಿ, ಸಂಜೆಯವರೆಗೆ ವಿಚಾರಣೆ ನಡೆಸಿದೆ. ಬಳಿಕ ಸಂಜೆ ಬಾಷಾ ಅವರ ಕಿರಿಯ ಪುತ್ರ ಅಮ್ಮಾರ್ ಎಂಬಾತನನ್ನು ಹೆಚ್ಚಿನ ವಿಚಾರಣೆಗೆಂದು ವಶಕ್ಕೆ ಪಡೆದುಕೊಂಡಿದೆ.

ಆತನನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗೆ ಬೆಂಗಳೂರು ಅಥವಾ ದಿಲ್ಲಿಗೆ ಕರೆದೊಯ್ಯಲಾಗುತ್ತದೆ ಎನ್ನಲಾಗಿದೆ. ಈ ಬಗ್ಗೆ ಎನ್‌ಐಎ ಅಥವಾ ಸ್ಥಳೀಯ ಪೊಲೀಸರು ಯಾವುದೇ ಅಧಿಕೃತ ಪ್ರಕಟಣೆ ಅಥವಾ ಹೇಳಿಕೆಗಳನ್ನು ಈವರೆಗೆ ನೀಡಿಲ್ಲ.

- Advertisement -

Latest News

error: Content is protected !!