Wednesday, May 15, 2024
Homeಇತರಮಂಗಳೂರು: ನಿಫಾ ಸೋಂಕಿನ ಶಂಕೆ...! ಗೋವಾ ಮೂಲದ ವ್ಯಕ್ತಿಯ ರಕ್ತದ ಮಾದರಿ‌ ಪರೀಕ್ಷೆಗೆ ರವಾನೆ...!

ಮಂಗಳೂರು: ನಿಫಾ ಸೋಂಕಿನ ಶಂಕೆ…! ಗೋವಾ ಮೂಲದ ವ್ಯಕ್ತಿಯ ರಕ್ತದ ಮಾದರಿ‌ ಪರೀಕ್ಷೆಗೆ ರವಾನೆ…!

spot_img
- Advertisement -
- Advertisement -

ಮಂಗಳೂರು: ನಿಫಾ ಸೋಂಕಿನ ಶಂಕೆಯಲ್ಲಿ ಗೋವಾ ಮೂಲದ ವ್ಯಕ್ತಿಯೊಬ್ಬರು ಮಂಗಳೂರಿನಲ್ಲಿ ಪರೀಕ್ಷೆಗೆ ಒಳಗಾಗಿದ ಘಟನೆ ನಡೆದಿದೆ.

ಈತನ ವರದಿಯು ಸೆ.15ರೊಳಗೆ ಬರುವ ಸಾಧ್ಯತೆಯಿದೆ. ನೆರೆಯ ರಾಜ್ಯ ಕೇರಳದಲ್ಲಿ ಭಾರೀ ಆತಂಕ ಮೂಡಿಸಿರುವ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ತಪಾಸಣೆಗೊಳಪಟ್ಟಿರುವ ವ್ಯಕ್ತಿ ಗೋವಾದಲ್ಲಿ ಆರ್​ಟಿ-ಪಿಸಿಆರ್​ ಕಿಟ್ ತಯಾರಿಸುವ ಲ್ಯಾಬ್​ವೊಂದರಲ್ಲಿ ಮೈಕ್ರೋ ಬಯಾಲಜಿಸ್ಟ್​ ಆಗಿ ಕೆಲಸ ಮಾಡುತ್ತಿದ್ದರು. ಎರಡು ದಿನಗಳ ಹಿಂದೆ ಜ್ವರ ಬಂದು ಗುಣಮುಖನಾಗಿದ್ದ ಇವರು, ನಿಫಾ ವೈರಸ್​ ಬಂದಿರಬಹುದೆಂಬ ಶಂಕೆ ಹಿನ್ನೆಲೆ ಟೆಸ್ಟ್ ಮಾಡಿಸಿದ್ದಾರೆ.

ಇವರು ಗೋವಾದಿಂದ ಕಾರವಾರಕ್ಕೆ ಬಂದು, ಅಲ್ಲಿಂದ ಮಣಿಪಾಲಕ್ಕೆ ತೆರಳಿ ಅಲ್ಲಿಂದ ನೇರವಾಗಿ ಮಂಗಳೂರಿಗೆ ಬಂದಿದ್ದಾರೆ. ಇವರ ಮಾದರಿ ಪಡೆದಿರುವ ಆರೋಗ್ಯ ಇಲಾಖೆ ಪರೀಕ್ಷೆಗೆ ಕಳಿಸಿದ್ದು, ಸೆ.15ರೊಳಗೆ ವರದಿ ಬರಲಿದೆ. ಅವರನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ತಿಳಿಸಿದ್ದಾರೆ.

ಆ ವ್ಯಕ್ತಿ ಲ್ಯಾಬ್​ನಲ್ಲಿ ಕೆಲಸ ಮಾಡುತ್ತಿದ್ದ ಹಿನ್ನೆಲೆ ಸ್ವಇಚ್ಛೆಯಿಂದ ತಪಾಸಣೆಗೊಳಪಟ್ಟಿದ್ದಾರೆ. ಅವರಲ್ಲಿ ರೋಗದ ಯಾವುದೇ ಗುಣಲಕ್ಷಣ ಇರಲಿಲ್ಲ. ಆ ವ್ಯಕ್ತಿಯ ಮಾದರಿ ಪಡೆದು ಪರೀಕ್ಷೆಗೆ ಕಳುಹಿಸಲಾಗಿದೆ. ಇನ್ನೇನು ರಿಪೋರ್ಟ್ ಬರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

- Advertisement -
spot_img

Latest News

error: Content is protected !!