Friday, June 26, 2026
Homeತಾಜಾ ಸುದ್ದಿಸುರಕ್ಷತಾ ಕ್ರಮಗಳೊಂದಿಗೆ ಇಂದಿನಿಂದ ಕೆಎಸ್ ಆರ್ ಟಿಸಿ ರಾತ್ರಿ ಬಸ್ ಸೇವೆ ಆರಂಭ

ಸುರಕ್ಷತಾ ಕ್ರಮಗಳೊಂದಿಗೆ ಇಂದಿನಿಂದ ಕೆಎಸ್ ಆರ್ ಟಿಸಿ ರಾತ್ರಿ ಬಸ್ ಸೇವೆ ಆರಂಭ

- Advertisement -
- Advertisement -

ಬೆಂಗಳೂರು: ಕೋವಿಡ್‌-19 ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಲಾಕ್‌ಡೌನ್‌ ಆದೇಶದಂತೆ ಸಾರಿಗೆ ಕಾರ್ಯಾಚರಣೆಯನ್ನು ಮಾರ್ಚ್‌ 24ರಿಂದ ಮೇ 18ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಪ್ರಯಾಣಿಕರ ಒತ್ತಡ ಮತ್ತು ನಷ್ಟ ಸರಿದೂಗಿಸುವ ಉದ್ದೇಶದಿಂದ ಇಂದಿನಿಂದ ಕೆ.ಎಸ್.ಆರ್.ಟಿ.ಸಿಯಿಂದ ರಾತ್ರಿ ಬಸ್ ಸೇವೆ ಆರಂಭಿಸಲಾಗಿದೆ.

“ಪ್ರಯಾಣಿಕರ ಸುರಕ್ಷತೆ ನಮ್ಮ ಪ್ರಥಮ ಆದ್ಯತೆ” ಎಂದಿರುವ ಸಾರಿಗೆ ಇಲಾಖೆ, ವ್ಯಕ್ತಿಗತ ಅಂತರ ಕಾಪಾಡಿ , ಸ್ಯಾನಿಟೈಸರ್ ಬಳಸಿ, ಮಾಸ್ಕ್ ಧರಿಸಿದವರಿಗೆ ಪ್ರಯಾಣಕ್ಕೆ ಅವಕಾಶ ನೀಡಲಾಗಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Latest News

error: Content is protected !!