Saturday, May 18, 2024
Homeತಾಜಾ ಸುದ್ದಿಜನಾಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ ; ನೈಟ್ ಕರ್ಫ್ಯೂ ವಾಪಸ್ ಪಡೆದ ಸರ್ಕಾರ

ಜನಾಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ ; ನೈಟ್ ಕರ್ಫ್ಯೂ ವಾಪಸ್ ಪಡೆದ ಸರ್ಕಾರ

spot_img
- Advertisement -
- Advertisement -

ಬೆಂಗಳೂರು ; ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ  ಕಫ್ರ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು. ಆದ್ರೀಗ ಸರ್ಕಾರ ಕರ್ಫ್ಯೂವನ್ನು ವಾಪಸ್ ಪಡೆದಿದೆ.

ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಅಲ್ಲದೇ ರಾತ್ರಿ ಕಫ್ರ್ಯೂವಿನ  ಅಗತ್ಯವಿಲ್ಲವೆಂಬಂತಹ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ವಿರೋಧ ಪಕ್ಷಗಳು ಕೂಡ ಸರ್ಕಾರದ ನಡೆಯನ್ನು ಟೀಕಿಸಿದ್ದವು. ಈ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದಿದೆ.

ಸಾರ್ವಜನಿಕರು ಸ್ವಯಂ ನಿರ್ಬಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು,  ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು  ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಲು ಕೋರಿದೆ.

- Advertisement -
spot_img

Latest News

error: Content is protected !!