Friday, June 27, 2025
Homeಕರಾವಳಿಲಾಕ್ ಡೌನ್ ಸಡಿಲಿಕೆಯಾದರೂ ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ

ಲಾಕ್ ಡೌನ್ ಸಡಿಲಿಕೆಯಾದರೂ ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ

spot_img
- Advertisement -
- Advertisement -

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದಿನಿಂದ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದ್ದರೂ ಕೂಡ ರಾತ್ರಿ 9 ಗಂಟೆಯ ಬಳಿಕ ಕರ್ಫ್ಯೂ ಮುಂದುವರಿಯಲಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ತಿಳಿಸಿದ್ದಾರೆ.

ಲಾಕ್‌ಡೌನ್ ಸಡಿಲಿಕೆ ಮಾಡಿದರೂ ಕೂಡ ಜನರು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ಯಾವ ಕಾರಣಕ್ಕೂ ನಿರ್ಲಕ್ಷ ಮಾಡಬಾರದು. ಕೋವಿಡ್ 19 ಮಾರ್ಗಸೂಚಿಯನ್ನು ಯಥಾವತ್ತಾಗಿ ಪಾಲಿಸಬೇಕು ಎಂದು ಡಿಸಿ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಚಿತ್ರಮಂದಿರಗಳನ್ನು ತೆರೆಯಲು ಅವಕಾಶವಿಲ್ಲ. ಅಲ್ಲದೆ ಯಾವುದೇ ಸಾಮಾಜಿಕ, ರಾಜಕೀಯ, ಕ್ರೀಡೆ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಲಿಗೆ ಅವಕಾಶವಿಲ್ಲ. ಎಲ್ಲಾ ಅಂಗಡಿಗಳು, ರೆಸ್ಟೋರೆಂಟ್‌ಗಳು, ಮಾಲ್‌ಗಳು, ಖಾಸಗಿ ಕಚೇರಿಗಳಲ್ಲಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!