Monday, April 29, 2024
Homeತಾಜಾ ಸುದ್ದಿರಾಮನಗರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿಕೆ

ರಾಮನಗರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿಕೆ

spot_img
- Advertisement -
- Advertisement -

ಬೆಂಗಳೂರು: ರಾಮನಗರದಿಂದ ಈ ಬಾರಿ ನಿಖಿಲ್ ಕುಮಾರಸ್ವಾಮಿ ಅವರ ಸ್ಪರ್ಧೆ ಖಚಿತವಾಗಿದೆ. ರಾಮನಗರದಲ್ಲಿ ನಡೆಯುತ್ತಿರುವ ಶ್ರೀನಿವಾಸ ಕಲ್ಯಾಣದ ಬಳಿಕ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. ಈ ಬೆನ್ನಲ್ಲೇ ರಾಮನಗರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಲಾಗಿದೆ.

ಇಂದು ಈ ಬಗ್ಗೆ ಮಾಹಿತಿ ನೀಡಿರುವ ಶಾಸಕ ಅನಿತಾ ಕುಮಾರಸ್ವಾಮಿಯವರು ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ. ನಮ್ಮ ಮಾವನವರಿಗೆ, ನನ್ನ ಪತಿ ಅವರಿಗೆ, ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡುವಂತೆ ಮನವಿ ಮಾಡಿದ್ದಾರೆ.

ಇನ್ನೂ ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅದಕ್ಕೆಲ್ಲಾ ತೆರೆ ಎಳೆಯಬೇಕು ಎಂದು ಇವತ್ತು ನಿರ್ಧಾರ ಮಾಡಿದ್ದೇನೆ. ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯುವುದಾಗಿ ಘೋಷಣೆ ಮಾಡಿದರು.

- Advertisement -
spot_img

Latest News

error: Content is protected !!