Friday, April 26, 2024
Homeಇತರನಿಖಿಲ್ ಕುಮಾರಸ್ವಾಮಿ ಮದುವೆ: ಸರ್ಕಾರದ ನಿಲುವೇನು.? 'ಹೈಕೋರ್ಟ್' ಪ್ರಶ್ನೆ

ನಿಖಿಲ್ ಕುಮಾರಸ್ವಾಮಿ ಮದುವೆ: ಸರ್ಕಾರದ ನಿಲುವೇನು.? ‘ಹೈಕೋರ್ಟ್’ ಪ್ರಶ್ನೆ

spot_img
- Advertisement -
- Advertisement -

ಬೆಂಗಳೂರು: ಲಾಕ್ಡೌನ್ ನಡುವೆ ನಿಖಿಲ್ ಕುಮಾರಸ್ವಾಮಿ ಮದುವೆಗೆ ಅನುಮತಿ ಕಾನೂನು ಬದ್ಧವೇ..? ಎಂದು ಹೈಕೋರ್ಟ್ ಪ್ರಶ್ನಿಸಿದೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರ ಮದುವೆ ಬಗ್ಗೆ ಹೈಕೋರ್ಟ್ ನಲ್ಲಿಯೂ ಪ್ರಸ್ತಾಪವಾಗಿದೆ. ಲಾಖ್ ಡೌನ್ ನಡುವೆಯೂ ನಿಖಿಲ್ ಕುಮಾರ್ ಮತ್ತು ರೇವತಿ ಅವರ ವಿವಾಹ ನೆರವೇರಿದ್ದು, ಈ ಬಗ್ಗೆ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ.

ಮುಖ್ಯಮಂತ್ರಿಗಳೇ ಈ ಬಗ್ಗೆ ಸ್ಪಷ್ಟನೆ ನೀಡಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇದಕ್ಕೆ ಹೆಚ್.ಡಿ. ಕುಮಾರಸ್ವಾಮಿ ಕೂಡ ಕೃತಜ್ಞತೆ ಸಲ್ಲಿಸಿದ್ದಾರೆ.

ಇಂದು ಹೈಕೋರ್ಟ್ ನಲ್ಲಿ ನಿಖಿಲ್ ಮದುವೆ ವಿಚಾರ ಪ್ರಸ್ತಾಪವಾಗಿ ಲಾಕ್ ಡೌನ್ ನಡುವೆಯೂ ಮದುವೆಗೆ ಅನುಮತಿ ನೀಡಿರುವುದು ಕಾನೂನು ಬದ್ದವೇ? ಈ ಬಗ್ಗೆ ಸರ್ಕಾರದ ನಿಲುವು ತಿಳಿಸಬೇಕೆಂದು ಹೈಕೋರ್ಟ್ ಸೂಚನೆ ನೀಡಿದ್ದು ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಮುಂದೂಡಿದೆ ಎಂದು ಹೇಳಲಾಗಿದೆ.

- Advertisement -
spot_img

Latest News

error: Content is protected !!