Friday, September 11, 2026
Homeತಾಜಾ ಸುದ್ದಿಮುಂದಿನ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತವೆಂದ ಹೆಚ್ಡಿಕೆ

ಮುಂದಿನ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತವೆಂದ ಹೆಚ್ಡಿಕೆ

- Advertisement -
- Advertisement -

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡೋದು ಖಚಿತ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಹಲವಾರು ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕರೆಯುತ್ತಿದ್ದಾರೆ. ಅಂತಿಮವಾಗಿ ಎಲ್ಲಿ ನಿಲ್ಲಬೇಕು ಎಂಬುದನ್ನ ಪಕ್ಷ ತೀರ್ಮಾನ ಮಾಡಲಿದೆ. ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಪಕ್ಷ ತೀರ್ಮಾನ ತೆಗೆದುಕೊಳ್ಳಲಿದೆ. ಎಲ್ಲೋ ಒಂದು ಕಡೆ ಸ್ವರ್ಧೆ ಮಾಡಲಿದ್ದಾರೆ ಎಂದರು. ಈ ಮೂಲಕ ಪುತ್ರ ನಿಖಿಲ್ ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದು ಕನ್ಫರ್ಮ್ ಆದಂತಾಗಿದೆ.

ಇನ್ನೂ, ಜೆಡಿಎಸ್‌ ತೊರೆಯಲು ಮುಂದಾಗಿದ್ದ ಹಿರಿಯ ಶಾಸಕ ಜಿ.ಟಿ ದೇವೇಗೌಡರನ್ನು ಮನವೊಲಿಕೆ ಮಾಡುವಲ್ಲಿ ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಯಶಸ್ವಿಯಾಗಿದ್ದು, ಈ ಮೂಲಕ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌ ಮತ್ತೆ ತನ್ನ ಕೋಟೆ ಭದ್ರಪಡಿಸಿಕೊಳ್ಳಲು ಕಸರತ್ತು ನಡೆಸಿದೆ. ಅಲ್ಲದೇ ಮೈಸೂರು ಭಾಗದ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ ದೇವೇಗೌಡ ಹಾಗೂ ಹುಣಸೂರು ಕ್ಷೇತ್ರದಿಂದ ಜಿಟಿಡಿ ಪುತ್ರ ಹರೀಶ್‌ ಗೌಡ ಅವರಿಗೆ ಜೆಡಿಎಸ್‌ ಟಿಕೆಟ್‌ ಘೋಷಣೆ ಮಾಡಲಾಗಿದೆ.

- Advertisement -

Latest News

error: Content is protected !!