- Advertisement -
![]()
- Advertisement -
ಪುತ್ತೂರು: ಪುತ್ತಿಲ ಪರಿವಾರ ಕಚೇರಿಯಲ್ಲಿ ತಲವಾರು ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರಿಗೆ ನವೆಂಬರ್ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಲ್ಪಟ್ಟಿದೆ.
ಹಿಂದೂ ಜಾಗರಣ ವೇದಿಕೆಯ ದಿನೇಶ್ ಪಂಜಿಗ ಸೇರಿದಂತೆ ಒಂಬತ್ತು ಜನರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ನಿನ್ನೆ ಮಧ್ಯಾಹ್ನ ಪುತ್ತಿಲ ಪರಿವಾರದ ಕಚೇರಿ ಮುಂಭಾಗ ತಲವಾರು ಪ್ರದರ್ಶಿಸಿದ್ದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರು ಸೇರಿದಂತೆ ನಿನ್ನೆ ಮಧ್ಯಾಹ್ನ ಕಾರಿನಲ್ಲಿ ಬಂದಿದ್ದ ತಂಡ ಪುತ್ತಿಲ ಪರಿವಾರದ ಮನೀಶ್ ಕುಲಾಲ್ ಗೆ ಬೆದರಿಕೆ ಹಾಕಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ ಸೇರಿದಂತೆ ಒಂಬತ್ತು ಜನರನ್ನು ಪೊಲೀಸರು ಬಂಧಿಸಿದ್ದರು.
- Advertisement -


