Friday, April 19, 2024
HomeUncategorizedಒಕ್ಕಲಿಗ ಸಮುದಾಯಕ್ಕೆ 12% ಮೀಸಲಾತಿ ನೀಡಬೇಕು:ಬೇಡಿಕೆ ಈಡೇರದಿದ್ದರೆ ಹಂತ ಹಂತವಾಗಿ ಹೋರಾಟದ ರೂಪುರೇಷೆ: ಆದಿಚುಂಚನಗಿರಿ ಮಠದ...

ಒಕ್ಕಲಿಗ ಸಮುದಾಯಕ್ಕೆ 12% ಮೀಸಲಾತಿ ನೀಡಬೇಕು:ಬೇಡಿಕೆ ಈಡೇರದಿದ್ದರೆ ಹಂತ ಹಂತವಾಗಿ ಹೋರಾಟದ ರೂಪುರೇಷೆ: ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಹೇಳಿಕೆ

spot_img
- Advertisement -
- Advertisement -

ಕೋಲಾರ: ಒಕ್ಕಲಿಗ ಸಮುದಾಯಕ್ಕೆ 12% ಮೀಸಲಾತಿ ನೀಡುವಂತೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಆಗ್ರಹಿಸಿದ್ದಾರೆ.

ಕೋಲಾರದಲ್ಲಿ ಇಂದು ಒಕ್ಕಲಿಗರ ಸಮುದಾಯದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ಭವನ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ಮಲಾನಂದನಾಥ ಸ್ವಾಮೀಜಿ ಈ ಒತ್ತಾಯ ಮಾಡಿದ್ದಾರೆ.

ನಮಗೆ 4% ಮೀಸಲಾತಿ ಸಾಕಾಗುವುದಿಲ್ಲ ಎಂಬ ಕೂಗು ಹಿಂದಿನಿಂದಲೂ ಇದೆ, ಸಂವಿಧಾನಕ್ಕೆ ವ್ಯತಿರಿಕ್ತವಾಗಿ ಮಾತನಾಡುವುದು ಬೇಡ ಎಂದು ಸುಮ್ಮನಿದ್ದೆವು ಎಂದು ಹೇಳಿರುವ ಸ್ವಾಮೀಜಿ, ಸಂವಿಧಾನದ ಚೌಕಟ್ಟಿನಲ್ಲಿ ಮೀಸಲಾತಿ ಹೆಚ್ಚಿಸುವುದಾದರೆ,
ನಮಗೂ 8% ಮೀಸಲಾತಿ ಹೆಚ್ಚಿಸಿ ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ ಕಾನೂನು ಸಮ್ಮತವಾಗಿ ನಮ್ಮ ಬೇಡಿಕೆ ಈಡೇರದಿದ್ದರೆ ಹಂತ ಹಂತವಾಗಿ ಹೋರಾಟದ ರೂಪುರೇಷೆಗಳಿಗೆ ತಯಾರು ಎಂದೂ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

- Advertisement -
spot_img

Latest News

error: Content is protected !!