ಬೆಂಗಳೂರು : ಕನ್ನಡ ಸಾರಸ್ವ ಲೋಕದ ದಿಗ್ಗಜ, ಕೆಎಸ್ ನಿಸಾರ್ ಅಹಮದ್ ನಿಧನರಾಗಿದ್ದಾರೆ. ಈ ಮೂಲಕ ನಿತ್ಯೋತ್ಸವ ಕವಿ ಇನ್ನಿಲ್ಲವಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆ ಎಸ್ ನಿಸಾರ್ ಅಹಮದ್ ವಿಧಿವಶರಾಗಿದ್ದಾರೆ.
ಪ್ರೊ. ಕೆ.ಎಸ್.ನಿಸಾರ್ ಅಹಮದ್ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ 5, 1936ರಲ್ಲಿ ಜನಿಸಿದರು. 1959ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1994ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು. ಇಂತಹ ಕವಿ ಅನಾರೋಗ್ಯದಿಂದ ಕಳೆದ ಹಲವು ದಿನಗಳಿಂದ ಬಳಲುತ್ತಿದ್ದರು. ಇದೀಗ ವಯೋ ಸಹಜ ಕಾಯಿಲೆಯಿಂದಾಗಿ ನಿಧನರಾಗಿದ್ದಾರೆ. ಈ ಮೂಲಕ ಕನ್ನಡ ಸಾರಸ್ವತ ಲೋಕದ ಕೊಂಡಿಯೊಂದು ಕಳಚಿದಂತೆ ಆಗಿದೆ.
ನಿಸ್ಸಾರ್ ಅಹಮದ್ ಸಾಹಿತ್ಯ ಕೃಷಿ
ನಿಸಾರ್ ಅಹಮದ್ ಅವರ ಸಾಹಿತ್ಯಾಸಕ್ತಿ 10ನೇ ವಯಸ್ಸಿನಲ್ಲೇ ಆರಂಭ.’ಜಲಪಾತ’ದ ಬಗ್ಗೆ ಬರೆದ ಕವನ ಕೈಬರಹದ ಪತ್ರಿಕೆಯಲ್ಲಿ ಅಚ್ಚಾಗಿತ್ತು. ಅವರು ಇಲ್ಲಿಯವರೆಗೆ (2018) 21 ಕವನ ಸಂಕಲನಗಳು, 14 ವೈಚಾರಿಕೆ ಕೃತಿಗಳು, 5 ಮಕ್ಕಳ ಸಾಹಿತ್ಯ ಕೃತಿಗಳು, 5 ಅನುವಾದ ಕೃತಿಗಳು, 13 ಸಂಪಾದನಾ ಗ್ರಂಥಗಳನ್ನು ಹೊರತಂದಿದ್ದಾರೆ.
ಅವುಗಳಲ್ಲಿ ಮನಸು ಗಾಂಧಿಬಜಾರು ಹಾಗು ನಿತ್ಯೋತ್ಸವ ಇವು ಪ್ರಸಿದ್ಧ ಕವನ ಸಂಕಲನಗಳಾಗಿವೆ.
ನಿಸಾರ್ ಅಹಮದ್ ಸಂವೇದನಾಶೀಲ ಹಾಗೂ ಜನಪ್ರಿಯ ಕವಿ.
1978ರಲ್ಲಿ ಇವರ ಮೊದಲ ಭಾವಗೀತೆಗಳ ಧ್ವನಿಮುದ್ರಿಕೆ ನಿತ್ಯೋತ್ಸವ ಹೊರಬಂದು, ಕನ್ನಡ ಲಘುಸಂಗೀತ (ಸುಗಮ ಸಂಗೀತ) ಕ್ಷೇತ್ರದಲ್ಲಿ ಭರ್ಜರಿ ಯಶಸ್ಸು ಪಡೆಯಿತು. ಇದುವರೆಗೂ (2018) 13 ಧ್ವನಿಸುರುಳಿಗಳ ಮೂಲಕ ಅವರು ರಚಿಸಿದ ಕವನಗಳು, ಗೀತೆಗಳು ಸಂಗೀತದೊಂದಿಗೆ ಪ್ರಚುರಗೊಂಡಿವೆ.
ಕುರಿಗಳು ಸಾರ್ ಕುರಿಗಳು, ರಾಜಕೀಯ ವಿಡಂಬನೆ ಕವನ
ಭಾರತವು ನಮ್ಮ ದೇಶ (ಸರ್ ಮೊಹಮದ್ ಇಕ್ಬಾಲ್ ಅವರ ಸಾರೆ ಜಹಾಂ ಸೆ ಅಚ್ಚಾ ಕವನದ ಕನ್ನಡ ಭಾಷಾಂತರ)
ಬೆಣ್ಣೆ ಕದ್ದ ನಮ್ಮ ಕೃಷ್ಣ ಕವನ ಕವಿಯ ಬಹುಮುಖ ಪ್ರತಿಭೆಗೆ ಸಾಕ್ಷಿಯಾಗಿವೆ.