Wednesday, June 24, 2026
Homeತಾಜಾ ಸುದ್ದಿಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

- Advertisement -
- Advertisement -

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿರ್ಗಮಿತ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ನಿತಿನ್ ನಬಿನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೇರಿದಂತೆ ಪಕ್ಷದ ಹಲವು ರಾಷ್ಟ್ರೀಯ ನಾಯಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

45 ವರ್ಷ ವಯಸ್ಸಿನ ನಿತಿನ್ ನಬಿನ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅತಿ ಕಿರಿಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಬಿಜೆಪಿಗೆ 45 ವರ್ಷಗಳು ತುಂಬಿರುವ ಸಮಯದಲ್ಲೇ ನಬಿನ್ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿದ್ದ ನಿತಿನ್ ನಬಿನ್ ಅವರನ್ನು ನಿನ್ನೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು.

ತಮ್ಮ 26ನೇ ವಯಸ್ಸಿನಲ್ಲೇ ಶಾಸಕರಾಗಿದ್ದ ನಿತಿನ್ ನಬಿನ್ ಐದು ಬಾರಿ ಶಾಸಕರಾಗಿದ್ದು, ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗುವ ಮೊದಲು ಬಿಹಾರ ರಾಜ್ಯ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವರಾಗಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯರು ಕೂಡಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!