Wednesday, June 3, 2026
HomeWorldಬಿಹಾರ ಸಿಎಂ ಆಗಿ ನಿತೀಶ್‌ ಕುಮಾರ್‌ ಪ್ರಮಾಣವಚನ ಸ್ವೀಕಾರ

ಬಿಹಾರ ಸಿಎಂ ಆಗಿ ನಿತೀಶ್‌ ಕುಮಾರ್‌ ಪ್ರಮಾಣವಚನ ಸ್ವೀಕಾರ

- Advertisement -
- Advertisement -

ಬಿಹಾರ ಸಿಎಂ ಆಗಿ ನಿತೀಶ್‌ ಕುಮಾರ್‌ ಹಾಗೂ ಡಿಸಿಎಂ ಆಗಿ ಸಾಮ್ರಾಟ್‌ ಚೌಧರಿ, ವಿಜಯ್‌ ಕುಮಾರ್‌ ಸಿನ್ಹಾ ಅವರಿಂದು ಬೆಳಿಗ್ಗೆ ಪ್ರಮಾಣವಚನ ಸ್ವೀಕರಿಸಿದರು.

ಎನ್‌ಡಿಎ ನೇತೃತ್ವದಲ್ಲಿ ನಿತೀಶ್‌ ಕುಮಾರ್‌ ಮತ್ತೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದು, ಹೊಸ ಸರ್ಕಾರ ರಚನೆ ಆಗುತ್ತಿದೆ.

ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ನಡೆದಿದ್ದು, 10ನೇ ಬಾರಿಗೆ ನಿತೀಶ್‌ ಕುಮಾರ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಸೇರಿದಂತೆ ಘಟಾನುಘಟಿ ನಾಯಕರು ಭಾಗಿಯಾಗಿದ್ದರು.

- Advertisement -

Latest News

error: Content is protected !!