Wednesday, June 24, 2026
Homeತಾಜಾ ಸುದ್ದಿನಾಳೆ ಬಿಹಾರ ಸಿಎಂ ಆಗಿ ನಿತೀಶ್‌ ಕುಮಾರ್‌ ಪ್ರಮಾಣವಚನ ಸ್ವೀಕಾರ

ನಾಳೆ ಬಿಹಾರ ಸಿಎಂ ಆಗಿ ನಿತೀಶ್‌ ಕುಮಾರ್‌ ಪ್ರಮಾಣವಚನ ಸ್ವೀಕಾರ

- Advertisement -
- Advertisement -

ಪಾಟ್ನಾ: ಹತ್ತನೆ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಾಳೆ ನಿತೀಶ್‍ ಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜೆಡಿಯು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ನಿತೀಶ್ ಕುಮಾರ್‌ ಅವರು ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆಯಲಿರುವ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದು, ಕೇಂದ್ರ ಸಚಿವರು ಸೇರಿದಂತೆ ಎನ್‍ಡಿಎಯ ಹಲವು ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ನಿತೀಶ್ ನೇತೃತ್ವದ ಸರ್ಕಾರದಲ್ಲಿ ಬಿಜೆಪಿಯಿಂದ ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ, ಮಂಗಲ್ ಪಾಂಡೆ ನಿತೀಶ್ ಮಿಶ್ರಾ, ನಿತಿನ್ ನವೀನ್, ರೇಣು ದೇವಿ ನೀರಜ್ ಕುಮಾರ್ ಬಬ್ಲು ಸಂಜಯ್ ಸರವಾಗಿ ರಜನೀಶ್ ಕುಮಾರ್, ಜೆಡಿಯು ಪಕ್ಷದ ವಿಜಯ್ ಕುಮಾರ್ ಚೌಧರಿ, ವಿಜೇಂದ್ರ ಯಾದವ್, ಶ್ರವಣ್ ಕುಮಾರ್, ಅಶೋಕ್ ಚೌಧರಿ, ರತ್ನೇಶ್ ಸದಾ, ಸುನೀಲ್ ಕುಮಾರ್, ಶ್ಯಾಮ್ ರಜಕ್ ಜಮಾ ಖಾನ್ ಲೇಸಿ ಸಿಂಗ್ ದಾಮೋದರ್ ರಾವತ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

- Advertisement -

Latest News

error: Content is protected !!