Sunday, June 7, 2026
Homeತಾಜಾ ಸುದ್ದಿಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

- Advertisement -
- Advertisement -

ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆಯಷ್ಟೇ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡು ನಿತೀಶ್‌ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂದು ಮಹಾಘಟಬಂಧನ್‌ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್​​ ಕುಮಾರ್ ಅವರಿಗೆ ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ಆಗಸ್ಟ್​ 15ರ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎನ್ನಲಾಗಿದೆ. ಬಿಜೆಪಿಯೊಂದಿಗೆ ನಿತೀಶ್ ಕುಮಾರ್ ಹೊಂದಿದ್ದ ಸಚಿವ ಸಂಪುಟ ಹಂಚಿಕೆಯ ಸೂತ್ರವನ್ನೇ ಆರ್‌ಜೆಡಿ ಮತ್ತು ಜೆಡಿಯು ಅಳವಡಿಸಿಕೊಳ್ಳುವ ಸಾಧ್ಯತೆಯಿದೆ. ಹಣಕಾಸು, ರಸ್ತೆ ನಿರ್ಮಾಣ, ಪಟ್ಟಣ ಯೋಜನೆ, ಕೃಷಿ ಮತ್ತು ಭೂ ಕಂದಾಯ ಖಾತೆಗಳನ್ನು ನೀಡುವಂತೆ ಆರ್‌ಜೆಡಿ ಒತ್ತಾಯಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!