Friday, April 19, 2024
Homeತಾಜಾ ಸುದ್ದಿಜೋರಾಗಿದೆ ನಿವಾರ್ ಚಂಡಮಾರುತದ ಅಬ್ಬರ: ತಮಿಳುನಾಡಿನಲ್ಲಿ ಬಸ್ ಹಾಗೂ ವಿಮಾನ ಸಂಚಾರ ಸ್ಥಗಿತ

ಜೋರಾಗಿದೆ ನಿವಾರ್ ಚಂಡಮಾರುತದ ಅಬ್ಬರ: ತಮಿಳುನಾಡಿನಲ್ಲಿ ಬಸ್ ಹಾಗೂ ವಿಮಾನ ಸಂಚಾರ ಸ್ಥಗಿತ

spot_img
- Advertisement -
- Advertisement -

ನವದೆಹಲಿ: ಇಂದು ರಾತ್ರಿ 8 ಗಂಟೆಗೆ ತಮಿಳುನಾಡಿನ ಕರಾವಳಿ ಮೇಲೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ಉಗ್ರ ರೂಪ ತಾಳುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇನ್ನು ಚಂಡಮಾರುತ ಹಿನ್ನೆಲೆಯಲ್ಲಿ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದ ಹಲವು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಿನ್ನೆ ರಾತ್ರಿಯೇ ನಿವಾರ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದೆ. ಬುಧವಾರ ಅದು ತಮಿಳುನಾಡು ಮತ್ತು ಪುದುಚೇರಿಯನ್ನು ಕಾರೈಕಲ್ ಮತ್ತು ಮಾಮಲ್ಲಪುರಂ ನಡುವೆ ಹಾದು ಹೋಗಲಿದೆ.ಈ ವೇಳೆ ಗಂಟೆಗೆ 120-130 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ.

ಈ ಹಿನ್ನೆಲೆಯಲ್ಲಿ ಮೂರು ರಾಜ್ಯಗಳಲ್ಲಿ ಭಾರೀ ಮಳೆಯ ಸಾಧ್ಯತೆಗಳಿವೆ. ಹೀಗಾಗಿ ಯಾರೂ ಕೂಡ ಮೀನುಗಾರಿಕೆಗೆ, ಮೋಟಾರ್ ಬೋಟ್ಸ್ ಸೇರಿ ಇನ್ನಿತರೆ ಚಟುವಟಿಕೆಗಳಿಗಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಇಂದು ರಜೆ ಘೋಷಿಸಲಾಗಿದೆ. ಅಲ್ಲದೆ 7 ಜಿಲ್ಲೆಗಳಲ್ಲಿ ಬಸ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಕಣ್ಣೂರು, ಕೊಜಿಕೋಡ್, ವಿಜಯವಾಡ, ತಿರುಚಿ, ತೂತ್ತುಕುಡಿ, ಬೆಂಗಳೂರು, ಮಂಗಳೂರು ಮತ್ತು ಹುಬ್ಬಳ್ಳಿ ವಿಮಾನಗಳ ಸಂಚಾರ ಸದ್ಯ ರದ್ದಾಗಿದೆ.

ಅಂದ್ಹಾಗೆ ತಮಿಳುನಾಡು ಮತ್ತು ಪುದುಚೆರಿ ಸರ್ಕಾರಗಳಿಗೆ ಸಹಾಯ ಮಾಡಲು ಭಾರತೀಯ ಸೇನೆ ಕೂಡ ಸಿದ್ಧವಾಗಿದೆ. ಚಂಡಮಾರುತ ಎದುರಿಸಲು 12 ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (ಎಚ್‌ಎಡಿಆರ್) ತಂಡಗಳು ಮತ್ತು ಎರಡು ಎಂಜಿನಿಯರ್ ಕಾರ್ಯಪಡೆ ತಂಡಗಳನ್ನು ನಿಯೋಜಿಸಲು ಸೇನೆ ಸಿದ್ಧವಾಗಿದೆ ಎಂದು ರಕ್ಷಣಾ ಇಲಾಖೆಯ ಪ್ರಕಟಣೆ ತಿಳಿಸಿದೆ.

- Advertisement -
spot_img

Latest News

error: Content is protected !!