Thursday, June 4, 2026
Homeತಾಜಾ ಸುದ್ದಿ ಡಿ ಬಾಸ್ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿ ಸಂಖ್ಯೆ 6106

 ಡಿ ಬಾಸ್ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿ ಸಂಖ್ಯೆ 6106

- Advertisement -
- Advertisement -

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲು ಪಾಲಾದ ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿ 6106 ನ್ನು ನೀಡಲಾಗಿದೆ.

ಇನ್ನು ಉಳಿದ ಮೂವರು ಆರೋಪಿಗಳಲ್ಲಿ ಧನರಾಜ್​ಗೆ 6107, ವಿನಯ್​ಗೆ 6108, ಪ್ರದೂಶ್​ಗೆ 6109 ಸಂಖ್ಯೆಗಳನ್ನು ನೀಡಲಾಗಿದೆ. ಭದ್ರತೆ ದೃಷ್ಟಿಯಿಂದ ದರ್ಶನ್​ ಅನ್ನು ವಿಶೇಷ ಬ್ಯಾರಕ್​ನಲ್ಲಿ ಇರಿಸಲಾಗಿದೆ. ಪರಪ್ಪನ ಅಗ್ರಹಾರದಲ್ಲಿ ಮೂರು ವಿಶೇಷ ಬ್ಯಾರಕ್​ಗಳಿದ್ದು, ಇತರೆ ಕೈದಿಗಳಿಂದ ಅಪಾಯವಿರುವ ಆರೋಪಿಗಳನ್ನು ಈ ಬ್ಯಾರಕ್​ನಲ್ಲಿ ಇಡಲಾಗುತ್ತಿದೆ. ಇದೀಗ ದರ್ಶನ್​ ಅನ್ನು ಮೂರನೇ ಬ್ಯಾರಕ್​ನಲ್ಲಿ ಇರಿಸಲಾಗಿದೆ.

ಎರಡು ದಿನದ ಹಿಂದೆ ನ್ಯಾಯಾಂಗ ಬಂಧನಕ್ಕೆ ಒಳಪಟ್ಟ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರದ ಮಹಿಳಾ ವಿಭಾಗದ ಡಿ ಬ್ಯಾರಕ್​ನಲ್ಲಿ ಇರಿಸಲಾಗಿದೆ. ಪವಿತ್ರಾಗೆ 6024 ಸಂಖ್ಯೆಯನ್ನು ನೀಡಲಾಗಿತ್ತು. ಇಂದು ನ್ಯಾಯಾಂಗ ಬಂಧನಕ್ಕೆ ಒಳಪಟ್ಟ ಆರೋಪಿಗಳಿಗೆ ಇಂದು ಸೇರಿದಂತೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಜುಲೈ 4 ರವರೆಗೆ ದರ್ಶನ್ ಮತ್ತು ಗ್ಯಾಂಗ್ ನ್ಯಾಯಾಂಗ ಬಂಧನದಲ್ಲಿ ಇರಬೇಕಾಗಿದೆ.

- Advertisement -

Latest News

error: Content is protected !!