Sunday, June 30, 2024
Homeಕರಾವಳಿಉಡುಪಿಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರಸ್ತೆಯಲ್ಲಿ ತಡೆ ಬೇಲಿ ಇಲ್ಲ : ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಸ್ಪಷ್ಟೀಕರಣ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರಸ್ತೆಯಲ್ಲಿ ತಡೆ ಬೇಲಿ ಇಲ್ಲ : ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಸ್ಪಷ್ಟೀಕರಣ

spot_img
- Advertisement -
- Advertisement -

ಬೆಂಗಳೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಹೋಗುವ ರಾಜ್ಯ ಹೆದ್ದಾರಿಯಲ್ಲಿ ಪ್ರಾಣಿಗಳು ಅಡ್ಡ ಬರದಂತೆ ತಡೆ ಬೇಲಿ ಹಾಕುವ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಅರಣ್ಯ ಸಚಿವ ಉಮೇಶ್ ಕತ್ತಿ ಈ ಸ್ಪಷ್ಟೀಕರಣ ನೀಡಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ವನ್ಯ ಪ್ರಾಣಿಗಳು ವಾಹನಗಳಿಗೆ ಅಡ್ಡ ಬಂದು ಅಪಘಾತದಿಂದಾಗಿ ಯಾವುದೇ ಮಾನವ ಪ್ರಾಣ ಹಾನಿ ಮತ್ತು ಗಾಯಗೊಂಡ ಪ್ರಕರಣಗಳು ವರದಿಯಾಗಿಲ್ಲ ಎಂದು ಅರಣ್ಯ ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಹೋಗುವ ರಾಜ್ಯ ಹೆದ್ದಾರಿಯಲ್ಲಿ ತಡೆ ಬೇಲಿ ಹಾಕುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆಯೇ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಸರ್ಕಾರಕ್ಕೆ ಪ್ರಶ್ನೆ ಕೇಳಿದ್ದರು.

- Advertisement -
spot_img

Latest News

error: Content is protected !!