Tuesday, June 23, 2026
Homeತಾಜಾ ಸುದ್ದಿಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್; ಸದ್ಯಕ್ಕಿಲ್ಲ ಸಚಿವ ಸಂಪುಟ ವಿಸ್ತರಣೆ

ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್; ಸದ್ಯಕ್ಕಿಲ್ಲ ಸಚಿವ ಸಂಪುಟ ವಿಸ್ತರಣೆ

- Advertisement -
- Advertisement -

ಬೆಂಗಳೂರು : ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ ಎದುರಾಗಿದೆ.  ಬಿಜೆಪಿ ಹೈಕಮಾಂಡ್ ಮತ್ತೆ ನಿರಾಸೆ ಮೂಡಿಸಿದ್ದು, ಮತ್ತಷ್ಟು ದಿನ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ನಿನ್ನೆ ದೆಹಲಿಗೆ ತೆರಳಿದ್ದು, ದೆಹಲಿಯಲ್ಲಿ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಜೊತೆಗೆ ಮಹತ್ವದ ಸಭೆ ನಡೆಸಿದ್ದು, ಸಭೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧತೆ ಕುರಿತಂತೆ ಚರ್ಚೆ ನಡೆದಿದೆ. ಆದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಮತ್ತೆ ನಿರಾಸೆ ಮೂಡಿಸಿದೆ.

ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಸಚಿವ ಸಂಪುಟ ವಿಸ್ತರಣೆಗೆ ನಾವೇ ನಿರ್ಧರಿಸಿ ಹೇಳುತ್ತೇವೆ. ಈ ಮೂಲಕ ಸಂಪುಟ ವಿಸ್ತರಣೆ ಮತ್ತಷ್ಟು ದಿನ ವಿಳಂಬವಾಗಲಿದೆ.

- Advertisement -

Latest News

error: Content is protected !!