Friday, June 5, 2026
Homeಕರಾವಳಿಬಸವರಾಜ್ ಬೊಮ್ಮಾಯಿಯವ್ರೇ ಪೂರ್ಣಾವಧಿಗೆ ಮುಖ್ಯಮಂತ್ರಿ: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲು ಹೇಳಿಕೆ

ಬಸವರಾಜ್ ಬೊಮ್ಮಾಯಿಯವ್ರೇ ಪೂರ್ಣಾವಧಿಗೆ ಮುಖ್ಯಮಂತ್ರಿ: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲು ಹೇಳಿಕೆ

- Advertisement -
- Advertisement -

ಮಂಗಳೂರು: ಬಸವರಾಜ ಬೊಮ್ಮಾಯಿಯವ್ರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ.

ಮಂಗಳೂರಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಬಿಜೆಪಿಯ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್‌ ನ ಹಿನ್ನೆಲೆಯಲ್ಲಿ  ಪ್ರತಿಕ್ರಿಯಿಸಿರುವ ಅವರು, ಮುಂದಿನ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ, ಹಿರಿಯರಾದ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಎದುರಿಸುತ್ತೇವೆ ಎಂದಿದ್ದಾರೆ.

ಸಿದ್ದರಾಮಯ್ಯ ಉತ್ಸವದ ಬಳಿಕ ಕಾಂಗ್ರೆಸ್‌ ನಲ್ಲಿ ಒಳ ಜಗಳ, ಬೀದಿ ಜಗಳ ಹೆಚ್ಚಾಗಿದೆ. ಕೋಳಿವಾಡರಂತಹ ಹಿರಿಯ ನಾಯಕರು ಸಿದ್ದರಾಮಯ್ಯರನ್ನು ಬಯ್ಯುವಂತಾಗಿದೆ. ಕಾಂಗ್ರೆಸ್‌ ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹೋರಾಟ ಹೆಚ್ಚಾಗಿದೆ. ಅವರ ಒಳ ಜಗಳ, ಬೀದಿ ಜಗಳ, ಗೊಂದಲ, ಆಂತರಿಕ ಕಚ್ಛಾಟವನ್ನು ಮುಚ್ಚಿಡಲು ಕಾಂಗ್ರೆಸ್ ಈ ರೀತಿ ಟ್ವೀಟ್ ಮಾಡಿದೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!