Sunday, June 7, 2026
Homeಕರಾವಳಿಉಡುಪಿಬಿಜೆಪಿಯಲ್ಲಿ ಯಾವುದೇ ಗೊಂದಲಗಳಿಲ್ಲ: ಉಡುಪಿಯಲ್ಲಿ ಸಚಿವ ಕೋಟ ಹೇಳಿಕೆ

ಬಿಜೆಪಿಯಲ್ಲಿ ಯಾವುದೇ ಗೊಂದಲಗಳಿಲ್ಲ: ಉಡುಪಿಯಲ್ಲಿ ಸಚಿವ ಕೋಟ ಹೇಳಿಕೆ

- Advertisement -
- Advertisement -

ಉಡುಪಿ: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ಇಂದು ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅತ್ಯುತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ,‌ ಉಸ್ತುವಾರಿಗಳಿಗೆ ಜಿಲ್ಲೆಯ ಅಭಿವೃದ್ಧಿ ಕಡೆ ಗಮನ ಕೊಡುವಂತೆ ಹೇಳಿದ್ದಾರೆ. ಪಕ್ಷದಲ್ಲಿ ನಾಯಕತ್ವದ ಚರ್ಚೆ ಬಂದಾಗ ಅಧ್ಯಕ್ಷರು ನೋಡಿಕೊಳ್ಳುತ್ತಾರೆ, ಹೈಕಮಾಂಡ್, ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ, ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲಗಳು ಇಲ್ಲ, ನಾವು ಶಾಸಕರು ಸಂಸದರು ಮಂತ್ರಿಗಳು ನಮ್ಮ ನಮ್ಮ ಕೆಲಸ ಮಾಡುತ್ತಿದ್ದೇವೆ ಎಂದು ಉಡುಪಿಯಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

- Advertisement -

Latest News

error: Content is protected !!