- Advertisement -
![]()
- Advertisement -
ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಡಿ.ಕೆ. ಶಿವಕುಮಾರ್, ಗ್ಯಾರಂಟಿ ಕಾಂಗ್ರೆಸ್ ಸರಕಾರದ ಹೆಮ್ಮೆಯ ಯೋಜನೆಗಳಾಗಿದ್ದು, ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಕೆಯಾಗಲಿದೆ ಎಂದು ತಿಳಿಸಿದ್ದಾರೆ.
ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಅಕೌಂಟ್ ತೆರೆದು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೆ ಅರ್ಜಿ ಸಲ್ಲಿಸಲು ಹೇಳಲಾಗಿದೆಯೇ ಹೊರತು ಯೋಜನೆಗಳನ್ನು ನಿಲ್ಲಿಸಲು ಅಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
- Advertisement -


