Sunday, October 18, 2026
Homeತಾಜಾ ಸುದ್ದಿನಾಳೆ ಸಹಾಯಕ ಪ್ರಾಧ್ಯಾಪಕ ಹುದ್ದೆಯ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ...

ನಾಳೆ ಸಹಾಯಕ ಪ್ರಾಧ್ಯಾಪಕ ಹುದ್ದೆಯ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯ ಹೇಳಿಕೆ

- Advertisement -
- Advertisement -

ಬೆಂಗಳೂರು: ನಾಳೆ ಹಿಜಾಬ್ ವಿವಾದ ಕುರಿತ ವಿಚಾರಣೆಯ ಹೈಕೋರ್ಟ್ ತೀರ್ಪು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಿಷೇದಾಜ್ಞೆ ವಿಧಿಸಲಾಗಿದೆ. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುತ್ತಿರುವ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ಯಥಾ ಪ್ರಕಾರ ನಡೆಯಲಿದೆ.

ಜಿಲ್ಲೆಗಳಲ್ಲಿ ನಿಷೇದಾಜ್ಞೆ ಇದ್ದರೂ ಪರೀಕ್ಷೆಗೆ ತೆರಳಲು ಯಾವುದೇ ಸಮಸ್ಯೆ ಇಲ್ಲ ಮತ್ತು‌ ನಿಗದಿತ ಪರೀಕ್ಷೆಗಳು ಯಾವುದೇ ಆತಂಕವಿಲ್ಲದೇ ನಡೆಯಲಿವೆ.

ಹೀಗಾಗಿ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳು ಯಾವುದೇ ಆತಂಕ ಇಲ್ಲದೇ ಪರೀಕ್ಷೆಗೆ ಹಾಜರಾಗಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯ ತಿಳಿಸಿದ್ದಾರೆ

ಮಾರ್ಚ್ ಹದಿನಾರರಂದು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗಳು‌ ಮುಕ್ತಾಯವಾಗಲಿವೆ.

- Advertisement -

Latest News

error: Content is protected !!