- Advertisement -
- Advertisement -
ನವದೆಹಲಿ : ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟ ಎದುರಿಸುತ್ತಿರುವ ದೇಶದ ಜನತೆಗೆ ಕೇಂದ್ರ ಸರ್ಕಾರ ಶೀಘ್ರವೇ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ.
ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಸಂಬಂಧ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಗೃಹ ಸಚಿವ ಅಮಿತ್ ಷಾ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಈಗಾಗಲೇ ಸಭೆ ನಡೆಸಿದ್ದು, ಪ್ರಧಾನಮಂತ್ರಿ ಕಾರ್ಯಾಲಯ ಕರಡು ಪ್ರಸ್ತಾವನೆ ಸಿದ್ಧಪಡಿಸುವ ನಿರೀಕ್ಷೆ ಇದೆ.
ಲಾಕ್ ಡೌನ್ ಅವಧಿ ಮೇ. 17 ರವರೆಗೆ ವಿಸ್ತರಣೆಗೊಂಡ ಹಿನ್ನೆಲೆಯಲ್ಲಿ ಬ್ಯಾಂಕ್ ಸಾಲದ ಮೇಲಿನ ಕಂತು ಕಟ್ಟಲು ಈ ಹಿಂದೆ ನೀಡಲಾಗಿದ್ದ 3 ತಿಂಗಳ ವಿನಾಯಿತಿ ಮತ್ತೆ 3 ತಿಂಗಳು ವಿಸ್ತರಣೆಯಾಗುವ ಸಾಧ್ಯತೆ ಇದೆ. ಈ ಸಂಬಂಧ ಸಲ್ಲಿಕೆಯಾಗಿರುವ ಹೊಸ ಪ್ರಸ್ತಾವನೆಯನ್ನು ಆರ್ ಬಿಐ ಪರಿಶೀಲಿಸುತ್ತಿರುವುದಾಗಿ ತಿಳಿದುಬಂದಿದೆ.
- Advertisement -