Sunday, June 7, 2026
Homeಕರಾವಳಿಇಂದು ಮಧ್ಯಾಹ್ನದವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯದೇಗುಲದಲ್ಲಿ ಭಕ್ತರಿಗೆ ದೇವರ ದರ್ಶನಕ್ಕಿಲ್ಲ‌ ಅವಕಾಶ

ಇಂದು ಮಧ್ಯಾಹ್ನದವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯದೇಗುಲದಲ್ಲಿ ಭಕ್ತರಿಗೆ ದೇವರ ದರ್ಶನಕ್ಕಿಲ್ಲ‌ ಅವಕಾಶ

- Advertisement -
- Advertisement -

ಸುಬ್ರಹ್ಮಣ್ಯ: ಇಂದು  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಗ್ಗಿನಿಂದ ಮಧ್ಯಾಹ್ನದವರೆಗೆ  ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶವಿರುವುದಿಲ್ಲ ಎಮನದು ದೇಗುಲದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಚಂಪಾ ಷಷ್ಠಿ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ನ.20ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ಇರುವುದರಿಂದ ಭಕ್ತಾದಿಗಳಿಗೆ ಬೆಳಗ್ಗಿನಿಂದ ಮಧ್ಯಾಹ್ನದವರೆಗೆ  ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶವಿರುವುದಿಲ್ಲ.

ಇನ್ನು ಷಷ್ಠಿ ದಿನವಾದ ನ.29ರಂದು ಮಧ್ಯಾಹ್ನ ಪ್ರಾರ್ಥನೆ ಸೇವೆ ಇರುವುದಿಲ್ಲ. ಅಲ್ಲದೆ ನ.29ರಂದು ಆಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ಇರುವುದಿಲ್ಲ. ನ.23ರ ಲಕ್ಷದೀಪೋತ್ಸವದಂದು ಮತ್ತು ಚೌತಿ, ಪಂಚಮಿ, ಷಷ್ಠಿ ದಿನದಲ್ಲಿ ಪಂಚಾಮೃತ ಮಹಾಭಿಷೇಕ ಸೇವೆ ಇರುವುದಿಲ್ಲ.

ವಾರ್ಷಿಕ ಚಂಪಾ ಷಷ್ಠಿ ಜಾತ್ರಾ ಪ್ರಯುಕ್ತ ನ.21ರಿಂದ ಡಿ.5ರವರೆಗೆ ಸಂಜೆ ವೇಳೆ ನಡೆಯುವ ಆಶ್ಲೇಷ ಬಲಿ ಸೇವೆ ಇರುವುದಿಲ್ಲ. ಭಕ್ತಾದಿಗಳು ಸಹಕರಿಸಬೇಕು ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

- Advertisement -

Latest News

error: Content is protected !!