Thursday, June 13, 2024
Homeಕರಾವಳಿಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧ: ಜಿಲ್ಲಾಧಿಕಾರಿ ಆದೇಶ

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧ: ಜಿಲ್ಲಾಧಿಕಾರಿ ಆದೇಶ

spot_img
- Advertisement -
- Advertisement -

ಉಡುಪಿ: ಗಂಗೊಳ್ಳಿಯ ಏಪ್ರಿಲ್ 15 ರಂದು ವೀರೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದ್ದು, ಇದರ ಸಭಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಆಹ್ವಾನ ನೀಡಲಾಗಿತ್ತು. ಆದರೆ ಮುತಾಲಿಕ್ ಉಡುಪಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಈ ಬಗ್ಗೆ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶ ಹೊರಡಿಸಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮುತಾಲಿಕ್ ಆಗಮನವನ್ನು ನಿಷೇಧಿಸಲಾಗಿದೆ ಎಂದಿದ್ದಾರೆ.ಸಿ.ಆರ್.ಪಿ.ಸಿ. ಸೆಕ್ಷನ್ 133, 143, ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಿ ಕ್ರಮ ಕೈಗೊಂಡಿದ್ದಾರೆ.

- Advertisement -
spot_img

Latest News

error: Content is protected !!