Saturday, May 18, 2024
Homeತಾಜಾ ಸುದ್ದಿಪರೀಕ್ಷೆ ಇಲ್ಲದೆಯೇ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ವಿದ್ಯಾರ್ಥಿಗಳು ಪಾಸ್..!

ಪರೀಕ್ಷೆ ಇಲ್ಲದೆಯೇ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ವಿದ್ಯಾರ್ಥಿಗಳು ಪಾಸ್..!

spot_img
- Advertisement -
- Advertisement -

ಬೆಂಗಳೂರು: ಕೊರೊನಾ ಅಬ್ಬರಿಸುತ್ತಿರುವ ಹಿನ್ನಲೆಯಲ್ಲಿ ಪದವಿ ಪರೀಕ್ಷೆಗಳ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ.

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ
ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್‌ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ಸಹ ತೀರ್ಮಾನಿಸಲಾಗಿದ್ದು, ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಗಣನೆಗೆ ತೆಗೆದುಕೊಂಡು ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ನಿರಂತರ ಸಮಾಲೋಚನೆ ನಡೆಸಿದ ನಂತರ ಈ ಮಹತ್ವದ ನಿರ್ಧಾರ ಕೈಕೊಳ್ಳಲಾಗಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ಮತ್ತು ಅವರ ಉದ್ಯೋಗ- ಮತ್ತಿತರ ಭವಿಷ್ಯಕ್ಕೆ ಧಕ್ಕೆಯಾಗದಂತೆ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ.

ಈ ನಿರ್ಧಾರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2019-20) ಮಾತ್ರ ಸೀಮಿತವಾಗಿರುತ್ತದೆ. ಸರಕಾರದ ಈ ನಿರ್ಧಾರಕ್ಕೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿ ವಾಲ ಅವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಸುದ್ದಿಗಾರರಿಗೆ ತಿಳಿಸಿದರು.

ತೇರ್ಗಡೆ ಮಾಡುವುದು ಹೇಗೆ?:

ಮಧ್ಯಂತರ ಸೆಮಿಸ್ಟರ್‌, ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನ ಮತ್ತು ಹಿಂದಿನ ಸೆಮಿಸ್ಟರ್‌ ವರ್ಷದ ಅಂಕಗಳ (50:50) ಸಮಗ್ರ ಮೌಲ್ಯಮಾಪನದ ಆಧಾರದ ಮೇಲೆ ತೇರ್ಗಡೆ ಮಾಡಲಾಗುತ್ತದೆ.

ಹಿಂದಿನ ವರ್ಷದ ಅಂಕಗಳು ಇಲ್ಲದ ವಿದ್ಯಾರ್ಥಿಗಳನ್ನು (ಉದಾ: ಮೊದಲ ಸೆಮಿಸ್ಟರ್‌ ವಿದ್ಯಾರ್ಥಿಗಳು) ಪೂರ್ಣ ಅಂತರಿಕ ಮೌಲ್ಯಮಾಪನದ ಮೂಲಕವೇ ಉತ್ತೀರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು. ಇದರ ನಡುವೆಯೂ ತಮ್ಮ ಅಂಕಗಳನ್ನು ಉತ್ತಮಗೊಳಿಸಿಕೊಳ್ಳಬೇಕೆನ್ನುವ ವಿದ್ಯಾರ್ಥಿಗಳು ಸೆಮಿಸ್ಟರ್‌ನಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುವುದು. ಬ್ಯಾಕ್‌ಲಾಗ್‌ ವಿಷಯಗಳ ಕ್ಯಾರಿ ಓವರ್‌ಗೂ ಅವಕಾಶ ಇರುತ್ತದೆ ಎಂದು ಡಿಸಿಎಂ ತಿಳಿಸಿದರು.

- Advertisement -
spot_img

Latest News

error: Content is protected !!