Monday, July 1, 2024
Homeಶಿಕ್ಷಣಎಸ್ ಎಸ್ ಎಲ್ ಸಿ ಎರಡನೇ ಮತ್ತು ಮೂರನೇ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇಲ್ಲ; ಉಡುಪಿಯಲ್ಲಿ...

ಎಸ್ ಎಸ್ ಎಲ್ ಸಿ ಎರಡನೇ ಮತ್ತು ಮೂರನೇ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇಲ್ಲ; ಉಡುಪಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

spot_img
- Advertisement -
- Advertisement -

ಉಡುಪಿ: ಎಸ್ಎಸ್ಎಲ್ ಸಿ
ಎರಡು ಮತ್ತು ಮೂರನೇ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಮಧು ಬಂಗಾರಪ್ಪ, ಉಡುಪಿ ಮತ್ತು ದಕ್ಷಿಣ ಕನ್ನಡ ಯಾವತ್ತೂ ಮೊದಲ ಸ್ಥಾನದಲ್ಲಿ ಇರುತ್ತಿದ್ದು
ನಂತರ ಫಲಿತಾಂಶದಲ್ಲಿ ಇಳಿಮುಖವಾಯಿತು,
ಈಗ ಮತ್ತೆ ಉಡುಪಿ ಮತ್ತು ದಕ್ಷಿಣ ಕನ್ನಡ ಮೊದಲ ಸ್ಥಾನಕ್ಕೆ ಬಂದಿವೆ ಎಂದು ಹೇಳಿದ್ದಾರೆ.

ಪರೀಕ್ಷೆಗಳ ಪಾವಿತ್ರ್ಯತೆ ಉಳಿಸಲು 20 ಗ್ರೇಸ್ ಮಾರ್ಕ್ ನೀಡಲಾಗಿದ್ದು,
ಅಗತ್ಯವಿದ್ದವರು ಎರಡು ಮತ್ತು ಮೂರನೇ ಪರೀಕ್ಷೆ ತೆಗೆದುಕೊಳ್ಳಬಹುದು ಎಂದು ಹೇಳಿರುವ ಮಧು ಬಂಗಾರಪ್ಪ, ಎರಡನೇ ಮತ್ತು ಮೂರನೇ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಶಾಲೆ ಪುನರಾರಂಭ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ, ಪುಸ್ತಕಗಳು ಮತ್ತು ಸಮವಸ್ತ್ರ ಎಲ್ಲವೂ ಇದ್ದು ಸಕಾಲದಲ್ಲಿ ವಿದ್ಯಾರ್ಥಿಗಳಿಗೆ ಸವಲತ್ತು ತಲುಪಲಿವೆ ಎಂದು ಭರವಸೆ ನೀಡಿದ್ದಾರೆ.

- Advertisement -
spot_img

Latest News

error: Content is protected !!